HomeKarnatakaಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲೇ ಕಸಾಪ ರಾಜ್ಯಾಧ್ಯಕ್ಷರಿಗೆ ಚಾಟಿ ಬೀಸಿದ ಹರಿಪ್ರಸಾದ್

ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲೇ ಕಸಾಪ ರಾಜ್ಯಾಧ್ಯಕ್ಷರಿಗೆ ಚಾಟಿ ಬೀಸಿದ ಹರಿಪ್ರಸಾದ್

ಹಾವೇರಿ: ಸಾಹಿತ್ಯ ಲೋಕಕ್ಕೆ ಹಾವೇರಿ ತನ್ನದೇ ಆದ ಕೊಡುಗೆ ನೀಡಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ.

86 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಇವತ್ತು ಜಾತಿ, ಧರ್ಮ, ಭ್ರಷ್ಟಾಚಾರದಿಂದ ರಾಜಕೀಯ ಕೂಡಿದೆ. ಸಾಹಿತಿಗಳು ಇದನ್ನು ತಿದ್ದುವ ಕೆಲಸ ಮಾಡುತ್ತಿದ್ದಾರೆ. ರಾಜಕಾರಣಿಗಳು ಹಣ, ಹೆಂಡ ಹಂಚುವುದು ಸಾಮಾನ್ಯವಾಗಿದೆ. ರಾಜಕಾರಣಿಗಳು ಮಾಡಿದ ತಪ್ಪನ್ನು ಸಾಹಿತಿಗಳು ಮಾಡಬಾರದು ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಸಾಹಿತ್ಯ ಸಮ್ಮೇಳನದಲ್ಲಿ ಕೆಲವು ಸಾಹಿತಿಗಳನ್ನು ದೂರವಿಡಲಾಗಿದೆ. ಇದಕ್ಕಾಗಿ ಬೆಂಗಳೂರಿನಲ್ಲಿ ಪ್ರತ್ಯೇಕ ಸಮ್ಮೇಳನ ಮಾಡಲಾಗಿದೆ. ಆಮಂತ್ರಣ ಪತ್ರಿಕೆ ನೋಡಿದರೆ ಅದು ಸತ್ಯ ಎನ್ನಿಸುತ್ತದೆ. ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷರು ತಪ್ಪನ್ನು ತಿದ್ದಿಕೊಳ್ಳುವ ಕೆಲಸ ಮಾಡಬೇಕು ಎಂದು ಸಾಹಿತ್ಯ ಸಮ್ಮೇಳನದ ಸಮಾರೋಪದಲ್ಲಿ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular