ಹಾವೇರಿ: ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿಯೋರ್ವಳನ್ನು ಕಿಡ್ನ್ಯಾಪ್ ಮಾಡಿ ಕಾಡಿಗೆ ಕರೆದೊಯ್ದು ಇಬ್ಬರು ಕಾಮುಕರು ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವ್ ತಾಲೂಕಿನ ತಡಸ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ವಿದ್ಯಾರ್ಥಿನಿಯ ಬಾಯಿಗೆ ಬಟ್ಟೆ ಕಟ್ಟಿ ಕಾಡಿಗೆ ಎತ್ತಿಕೊಂಡು ಹೋಗಿ ಲೈಂಗಿಕ ದೌರ್ಜನ್ಯವೆಸಗಿದ್ದಾರೆ. ಅಭಿಷೇಕ್ ಲಮಾಣಿ ಹಾಗೂ ಪ್ರವೀಣ್ ಲಮಾಣಿ ಎಂಬ ಇಬ್ಬರು ಈ ಕೃತ್ಯವೆಸಗಿದ್ದಾರೆ. ಲೈಂಗಿಕ ದೌರ್ಜನ್ಯದ ವಿಡಿಯೋ ಮಾಡಿಟ್ಟುಕೊಂಡು ನಾವು ಹೇಳಿದಂತೆ ಕೇಳಬೇಕು ಇಲ್ಲವಾದಲ್ಲಿ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆಯೊಡ್ಡಿದ್ದಾರೆ. ಸಂತ್ರಸ್ತೆ ಮಕ್ಕಳ ಸಹಾಯವಾಣಿಗೆ ಕರೆ ಮಾಡಿ ದೂರು ನೀಡಿದ್ದರು. ದೂರಿನ ಹಿನ್ನೆಲೆಯಲ್ಲಿ ಪೊಕ್ಸೋ ಕೇಸ್ ದಾಖಲಾಗಿದೆ.
ಪ್ರಕರಣ ಸಂಬಂಧ ಓರ್ವ ಆರೋಪಿ ಅಭಿಷೇಕ್ ಲಮಾಣಿಯನ್ನು ಬಂಧಿಸಲಾಗಿದ್ದು, ತಲೆಮರೆಸಿಕೊಂಡಿರುವ ಮತ್ತೋರ್ವ ಆರೋಪಿಗಾಗಿ ಹುಡುಕಾಟ ನಡೆಸಲಾಗಿದೆ