ಹಾವೇರಿ: ಪತ್ನಿ ಹಾಗೂ ಅತ್ತೆ-ಮಾವನ ವಿರುದ್ಧ ಕಿರುಕುಳ ಆರೋಪ ಮಾಡಿರುವ ಪತಿ ಮಹಾಶಯನೊಬ್ಬ ವಿಡಿಯೋ ಮಾಡಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿಯಲ್ಲಿ ನಡೆದಿದೆ.
ಹಾವೇರಿ ಜಿಲ್ಲೆಯ ಹಿರೇಕೇರೂರು ತಾಅಲೂಕಿನ ವಹರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಮೂಲದ ಮಂಜುನಾಥ್ ಆತ್ಮಹತ್ಯೆಗೆ ಶರಣಾದವನು. ಕುರಿಗಾಹಿಯಾಗಿದ್ದ ಮಂಜುನಾಥ್ ಗೆ ಪತ್ನಿ ಹಾಗೂ ಅತ್ತೆ-ಮಾವ ಕಿರುಕುಳ ನೀಡುತ್ತಿದ್ದರಂತೆ.
’ ಈ ಬಗ್ಗೆ ವಿಡಿಯೋ ಮಾಡಿಟ್ಟಿರುವ ಮಂಜುನಾಥ್, ತಾನು ಮಾನಸಿಕವಾಗಿ ತೀವ್ರವಾಗಿ ನೊಂದಿದ್ದೇನೆ. ಪತ್ನಿ ಹಾಗೂ ಆಕೆಯ ತಂದೆ-ತಾಯಿ ತನಗೆ ಕುರುಕುಳ ನೀಡುತ್ತಿದ್ದಾರೆ. ಇದರಿಂದ ನೊಂದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದಾನೆ. ಬಳಿಕ ಜಮೀನಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಹಿರೆಕೇರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
