ಹಾವೇರಿ: ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದ ಮೇಲೆ ಶಿಕ್ಷಕನೊಬ್ಬನನ್ನು ಥಳಿಸಿ ಚಪ್ಪಲಿ ಹಾರಹಾಕಿ ಮೆರವಣಿಗೆ ಮಾಡಿದ್ದ ಪ್ರಕರಣ ಸಂಬಂಧ ೨೨ ಜನರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಹಾವೇರಿ ಜಿಲ್ಲೆಯ ಸವಣೂರು ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಡಿಸೆಂಬರ್ 10ರಂದು ಶಾಲೆಯ ಮುಖ್ಯಶಿಕ್ಷಕ ರಾಜೇಸಾಬ ಖುದಾನಸಾಬ ಸಂಕನೂರ ಸವಣೂರು ಠಾಣೆಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಶಿಕ್ಷಕ ಜಗದೀಶ್ ವಗ್ಗಣ್ಣವರ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದೀಗ ಶಿಕ್ಷಕ ಜಗದೀಶ್ ಕೂಡ ದೂರು ದಾಖಲಿಸಿದ್ದು, ಚಪ್ಪಲಿಯಿಂದ ಹೊಡೆದು, ಚಪ್ಪಲಿ ಹಾರಕಾಕಿ ಮೆರವಣಿಗೆ ಮಾಡಿದ್ದರೆ ಎಂದು ದೂರಿದ್ದರು.
ವಿಡಿಯೋ ಆಧರಿಸಿ ಚಪ್ಪಲಿ ಹಾರಹಾಕಿ ಮೆರವಣಿಗೆ ಮಾಡಿದವರನ್ನು ಪತ್ತೆ ಮಾಡಲಾಗಿದ್ದು, ಜೀವಬೆದರಿಕೆಯೊಡ್ಡಿದ ಆರೋಪದಲ್ಲಿ ೨೨ ಜನರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಅಲ್ಲದೇ ಎಲ್ಲರನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.
