HomeKarnatakaBIG NEWS: ದೇವಸ್ಥಾನದ ಕಳಸಾರೋಹಣದ ವೇಳೆ ದುರಂತ: ಕ್ರೇನ್ ನಿಂದ ಬಿದ್ದು ವ್ಯಕ್ತಿ ದುರ್ಮರಣ

BIG NEWS: ದೇವಸ್ಥಾನದ ಕಳಸಾರೋಹಣದ ವೇಳೆ ದುರಂತ: ಕ್ರೇನ್ ನಿಂದ ಬಿದ್ದು ವ್ಯಕ್ತಿ ದುರ್ಮರಣ

ಹಾವೇರಿ: ದೇವಸ್ಥಾನದ ಕಳಸಾಹೋರನಹಣದ ವೇಳೆ ದುರಂತ ಸಂಭವಿಸಿದ್ದು, ಕ್ರೇನ್ ನಿಂದ ಬಿದ್ದು ವ್ಯಕ್ತಿಯೋರ್ವರು ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಶೇಷಗಿರಿ ಗ್ರಾಮದಲ್ಲಿ ನಡೆದಿದೆ.

ಮಂಜುನಾಥ್ ಪಾಟೀಲ್ (42) ಮೃತ ದುರ್ದೈವಿ. ಶೇಷಗಿರಿ ಗ್ರಾಮದಲ್ಲಿ ಗಂಗಾಪರಮೇಶ್ವರಿ ದೇವಸ್ಥಾನದ ಕಳಸಾರೋಹಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಂಜುನಾಥ್ ಹಾಗೂ ಇನ್ನೋರ್ವ ವ್ಯಕ್ತಿ ಕ್ರೇನ್ ಮುಂಭಾಗದ ಬುಟ್ಟಿಯಲ್ಲಿ ಹತ್ತಿ ಗೋಪುರಕ್ಕೆ ಕಳಸ ಇರಿಸಲು ಮುಂದಾಗಿದ್ದರು. ಈ ವೇಳೆ ಕ್ರೇನ್ ಬುಟ್ಟಿ ಏಕಾಏಕಿ ಕಳಚಿ ಬಿದ್ದಿದೆ. ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದರು.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಮಂಜುನಾಥ್ ತಲೆಗೆ ಗಂಭೀರವಾಗಿ ಪೆಟ್ಟುಬಿದ್ದ ಪರಿಣಾಮ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular