HomeKarnatakaದೇವಾಲಯದ ಆವರಣದಲ್ಲಿ ಮೂತ್ರ ವಿಸರ್ಜನೆ ಮಾಡಿ ವಿಕೃತಿ ಮೆರೆದ ಯುವಕ

ದೇವಾಲಯದ ಆವರಣದಲ್ಲಿ ಮೂತ್ರ ವಿಸರ್ಜನೆ ಮಾಡಿ ವಿಕೃತಿ ಮೆರೆದ ಯುವಕ

ಹಾವೇರಿ: ಒಮ್ಮೊಮ್ಮೆ ಮನುಷನ ಮನಃಸ್ಥಿತಿ ಯಾವ ಮಟ್ಟಕ್ಕೆ ಹೋಗುತ್ತದೆ ನೋಡಿ. ಇಲ್ಲೋರ್ವ ಯುವಕ ದೇವಸ್ಥಾನದ ಆವರಣದಲ್ಲಿ ಮೂತ್ರ ವಿಸರ್ಜನೆ ಮಾಡಿ ವಿಕೃತಿ ಮೆರೆದಿರುವ ಘಟನೆ ಹಾವೇರಿಯಲ್ಲಿ ನಡೆದಿದೆ.

ಹಾವೇರಿ ಜಿಲ್ಲೆಯ ಶಿಗ್ಗಾವಿ ಪಟ್ಟಣದಲ್ಲಿರುವ ಆಂಜನೇಯ ಮತ್ತು ಬನ್ನಿ ಮಹಾಕಾಳಿ ದೇವಾಲಯದ ಆವರಣದಲ್ಲಿ ಯುವಕನೊಬ್ಬ ಮೂತ್ರ ವಿಸರ್ಜನೆ ಮಾಡಿ ಹುಚ್ಚಾಟ ಮೆರೆದಿದ್ದಾನೆ. ಜಾಫರ್ ಎಂಬಾತ ಈ ಕೃತ್ಯವೆಸಗಿರುವ ಯುವಕ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಯುವಕನ ಕೃತ್ಯವನ್ನು ಗಮನಿಸಿದ ಸ್ಥಳೀಯರು ಕೂಡಲೇ ಆತನನ್ನು ಹಿಡಿದು ತರಾಟೆಗೆ ತೆಗೆದುಕೊಂಡಿದ್ದಾರೆ. ದೇಗುಲದ ಪಾವಿತ್ರ್ಯತೆಯನ್ನು ಭಂಗಗೊಳಿಸಿದ ಬಗ್ಗೆ ಪ್ರಶ್ನಿಸಿದಾಗ, ಯುವಕ ಸ್ಥಳೀಯರೊಂದಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ ಎಂದು ಆರೋಪಿಸಲಾಗಿದೆ. ಇದರಿಂದ ಆಕ್ರೋಶಗೊಂಡ ಜನರು ಯುವಕನನ್ನು ಥಳಿಸಿ, ನಂತರ ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.

ಪೊಲೀಸರು ಯುವಕ ಜಾಫರ್‌ನನ್ನು ವಶಕ್ಕೆ ಪಡೆದುಕೊಂಡಿದ್ದು, ಆತನ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಸ್ಥಳೀಯರು ಮತ್ತು ಹಿಂದೂಪರ ಸಂಘಟನೆಗಳು ಒತ್ತಾಯಿಸಿವೆ. ದೇವಸ್ಥಾನದ ಆವರಣದಲ್ಲಿ ಇಂತಹ ಕೃತ್ಯ ನಡೆಸಿದ ವ್ಯಕ್ತಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular