HomeKarnatakaBREAKING: ಪಟಾಕಿ ಅಂಗಡಿಯಲ್ಲಿ ಬೆಂಕಿ ಅವಘಡ; ಮೂರು ಲೋಡ್ ಪಟಾಕಿ ಕ್ಷಣಾರ್ಧದಲ್ಲಿ ಸುಟ್ಟು ಭಸ್ಮ

BREAKING: ಪಟಾಕಿ ಅಂಗಡಿಯಲ್ಲಿ ಬೆಂಕಿ ಅವಘಡ; ಮೂರು ಲೋಡ್ ಪಟಾಕಿ ಕ್ಷಣಾರ್ಧದಲ್ಲಿ ಸುಟ್ಟು ಭಸ್ಮ

ಹಾವೇರಿ: ಪಟಾಕಿ ಅಂಗಡಿಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ನೋಡ ನೋಡುತ್ತಿದ್ದಂತೆ ಪಟಾಕಿ ಅಂಗಡಿಯೇ ಹೊತ್ತಿ ಉರಿದಿರುವ ಘಟನೆ ಹಾವೇರಿ ಜಿಲ್ಲೆಯ ಆಲದಕಟ್ಟೆ ಬಳಿ ನಡೆದಿದೆ.

ಬೆಂಕಿ ಅವಘಡದಲ್ಲಿ ಕ್ಷಣಾರ್ಧದಲ್ಲಿ ಮೂರು ಲೋಡ್ ಪಟಾಕಿ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಕುಮಾರ್ ಸಾತೇನಹಳ್ಳಿ ಮಾಲೀಕತ್ವದ ಪಟಾಕಿ ಅಂಗಡಿಯಲ್ಲಿ ಈ ಅವಘಡ ಸಂಭವಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪಟಾಕಿ ಅಂಗಡಿಯ ಪಕ್ಕದಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದಾಗ ಬೆಂಕಿಯ ಕಿಡಿ ಪಟಾಕಿ ಅಂಗಡಿಯಲ್ಲಿನ ಪಟಾಕಿಗೆ ತಗುಲಿ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಪಟಾಕಿ ಶಬ್ದಕ್ಕೆ ಜನರು ಕಂಗಾಲಾಗಿ ಓಡಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

 

For Latest News Updates, Join Our Whatsapp Community🚩
RELATED ARTICLES

Most Popular