HomeKarnatakaBIG NEWS: ಹಾವೇರಿ ಪಟಾಕಿ ದುರಂತ; ಮೃತ ನಾಲ್ವರ ಕುಟುಂಬಕ್ಕೆ ಬಿಜೆಪಿಯಿಂದ ಪರಿಹಾರ ಘೋಷಣೆ

BIG NEWS: ಹಾವೇರಿ ಪಟಾಕಿ ದುರಂತ; ಮೃತ ನಾಲ್ವರ ಕುಟುಂಬಕ್ಕೆ ಬಿಜೆಪಿಯಿಂದ ಪರಿಹಾರ ಘೋಷಣೆ

ಹಾವೇರಿ: ಹಾವೇರಿಯ ಆಲದಕಟ್ಟೆ ಗ್ರಾಮದಲ್ಲಿ ಪಟಾಕಿ ಸಿಡಿಮದ್ದು ಗೋದಾಮಿನಲ್ಲಿ ನಾಲ್ವರು ಕಾರ್ಮಿಕರು ಸಜೀವ ದಹನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ಬಿಜೆಪಿ ಪರಿಹಾರ ಘೋಷಣೆ ಮಾಡಿದೆ.

ಈ ಘಟನೆ ಅತ್ಯಂತ ದು:ಖದ ಸಂಗತಿಯಾಗಿದೆ. ಬೆಂಕಿ ಅವಘಡದಲ್ಲಿ ಮೃತಪಟ್ಟ ನಾಲ್ವರ ಕುಟುಂಬಕ್ಕೆ ಬಿಜೆಪಿಯಿಂದ ತಲಾ 1 ಲಕ್ಷ ಪರಿಹಾರ ನೀಡಲಾಗುವುದು ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಘೋಷಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪಟಾಕಿ ದುರಂತದ ಬಗ್ಗೆ ರಾಜ್ಯ ಸರ್ಕಾರ ಸೂಕ್ತ ತನಿಖೆ ನಡೆಸಿ, ಮೃತರ ಕುಟುಂಬಕ್ಕೆ ಪರಿಹಾರ ನೀಡಬೇಕು. ಗಾಯಾಳುಗಳ ಚಿಕಿತ್ಸಾ ವ್ಯಚ್ಚವನ್ನು ಸರ್ಕಾರ ಭರಿಸಬೇಕು ಎಂದು ಒತ್ತಾಯಿಸಿದ್ದಾರೆ.

ಅಲ್ಲದೇ ಅಪಾಯಕಾರಿ ಸ್ಥಳಗಳಲ್ಲಿ ಕೆಲಸ ಮಾಡುವ ಕಾರ್ಮಿಕರ ರಕ್ಷಣೆಗೆ ಅಗತ್ಯವಿರುವ ಮುಂಜಾಗ್ರತಾ ಕ್ರಮಗಳ ಕುರಿತು ಅಧಿಕಾರಿಗಳು ನಿಗಾವಹಿಸಬೇಕು. ಹಾವೇರಿ ಜಿಲ್ಲೆ ಹಾಗೂ ರಾಜ್ಯದಲ್ಲಿ ಈ ರೀತಿಯ ಪಟಾಕಿ ಸಿಡಿಮದ್ದು ದಾಸ್ತಾನು ಕೇಂದ್ರಗಳ ಕುರಿತು ಪರಿಶೀಲನೆ ನಡೆಸಿ ಕಾರ್ಮಿಕರಿಗೆ ಸೂಕ್ತ ರಕ್ಷಣೆಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular