ಹಾವೇರಿ: ಐತಿಹಾಸಿಕ ಮಲ್ಲೇಶ್ವರ ಬೆಟ್ಟಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಅಪಾರ ಪ್ರಮಾಣದ ಅರಣ್ಯ ಸಂಪತ್ತು ಸುಟ್ಟು ಕರಕಲಾಗಿರುವ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಅರೇಮಲ್ಲಾಪುರ, ಐರಣಿ ಗ್ರಾಮದ ಬಳಿ ನಡೆದಿದೆ.
ಇಲ್ಲಿನ ಮಲ್ಲೇಶ್ವರ ಅರಣ್ಯ ಪ್ರದೇಶಕ್ಕೆ ಕಿಡಿಗೇದಿಗಳು ಬೆಂಕಿಯಿಟ್ತಿದ್ದು, ಬೆಟ್ಟ ಪ್ರದೇಶ ಸಂಪೂರ್ಣ ಧಗ ಧಗನೆ ಹೊತ್ತಿ ಉರಿಯುತ್ತಿದೆ. ಅಗ್ನಿಶಾಮಕ ಸಿಬ್ಬಂದಿ, ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.
ಅರಣ್ಯ ಪ್ರದೇಶದಲ್ಲಿ ಬೆಂಕಿ ಹೊತ್ತಿಕೊಂಡಿರುವುದರಿಂದ ಬೆಂಕಿ ನಿಯಂತ್ರಣಕ್ಕೆ ತರಲು ಹರಸಾಹಸಪಡಲಾಗುತ್ತಿದೆ. ರಾಣೆಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಐತಿಹಾಸಿಕ ಮಲ್ಲೇಶ್ವರ ಗುಡ್ಡವನ್ನು ಪ್ರವಾಸಿ ತಾಣವನ್ನಾಗಿಸಲು ರಾಜ್ಯ ಸರ್ಕಾರ ಈ ಸ್ಥಳವನ್ನು ಇತ್ತೀಚೆಗೆ ಆಯ್ಕೆ ಮಾಡಿದೆ. ಈಗ ಅದೇ ಅರಣ್ಯ ಪ್ರದೇಶಕ್ಕೆ ಬೆಂಕಿ ಬಿದ್ದಿದ್ದು, ಸಂಪದ್ಬರಿತ ವನಸ್ಪತಿ ಗುಡಮೂಲಿಕೆಗಳು ಬೆಂಕಿಗಾಹುತಿಯಾಗಿವೆ.

