ಹಾವೇರಿ: ಆಸ್ತಿ ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಎರಡು ಕುಟುಂಬಗಳ ನಡುವೆ ಜಮೀನಿನಲ್ಲಿಯೇ ಮಾರಾಮಾರಿ ನಡೆದಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ನದಿಹರಹಳ್ಳಿ ಗ್ರಾಮದಲ್ಲಿ ಎರಡು ಕುಟುಂಬಗಳ ನಡುವೆ ಹೊಡೆದಾಟ ನಡೆದಿದೆ. ಆಸ್ತಿ ವಿಚಾರವಾಗಿ ಕುಟುಂಬ ಸದಸ್ಯರು ಕೆಸರು ಗದ್ದೆಯಲ್ಲಿಯೇ ಹೊಡೆದಾಡಿಕೊಂಡಿದ್ದಾರೆ.
ಜಮೀನು ಕೆಲಸಕ್ಕೆಂದು ಗದ್ದಗೆ ಹೋಗಿದ್ದ ವೇಳೆ ಎರಡು ಕುಟುಂಬಗಳ ಸದಸ್ಯರ ನಡುವೆ ಮಾತಿಗೆ ಮಾತು ಬೆಳೆದು ಗಲಾಟೆ ತಾರಕಕ್ಕೇರಿದೆ. ಎರಡು ಕುಟುಬದವರು ಕೆಸರು ಗದ್ದೆಯಲ್ಲಿಯೇ ಬಡಿದಾಡಿಕೊಂಡಿದ್ದಾರೆ. ಅಷ್ಟೇ ಅಲ್ಲ ಗದ್ದೆಯಲ್ಲಿ ಕೆಡವಿ ಒಬ್ಬರನ್ನೊಬ್ಬರು ತುಳಿದು ಹಿಗ್ಗಾ ಮುಗ್ಗ ಹೊಡೆದುಕೊಂಡಿದ್ದಾರೆ. ಆಸ್ತಿ ವಿಚಾರಕ್ಕೆ ನಡೆದ ಗಲಾಟೆ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.

