HomeLatest Newsನನ್ನ ಆಡಳಿತ ತೃಪ್ತಿ ತಂದಿದೆ: ಜನರ ಆಶೀರ್ವಾದ ಇರುವವರೆಗೆ ರಾಜಕೀಯದಲ್ಲಿರುತ್ತೇನೆ ಎಂದ ಸಿಎಂ ಸಿದ್ದರಾಮಯ್ಯ

ನನ್ನ ಆಡಳಿತ ತೃಪ್ತಿ ತಂದಿದೆ: ಜನರ ಆಶೀರ್ವಾದ ಇರುವವರೆಗೆ ರಾಜಕೀಯದಲ್ಲಿರುತ್ತೇನೆ ಎಂದ ಸಿಎಂ ಸಿದ್ದರಾಮಯ್ಯ

ಹಾವೇರಿ: ರಾಜಕಾರಣದಲ್ಲಿ ಇರಬೇಕಾದರೆ ಜನರ ಆಶೀರ್ವಾದ ಇರಬೇಕು. ಅವರ ಆಶೀರ್ವಾದದಿಂದ ಇಲ್ಲಿಯವರೆಗೂ ಸಾಗಿ ಬಂದಿದ್ದೇನೆ. ಜನರ ಆಶೀರ್ವಾದ ಇರುವವರೆಗೆ ರಾಜಕೀಯದಲ್ಲಿರುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಹಾವೇರಿಯ ಕೊಳ್ಳಿ ಪಾಲಿಟೇಕ್ನಿಕ್ ಆವರಣದ ಹೆಲಿ ಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನನ್ನ ಆಡಳಿತ ತೃಪ್ತಿ ತಂದಿದೆ. ಎಲ್ಲಿಯವರೆಗೆ ರಾಜಕೀಯದಲ್ಲಿರುತ್ತೇನೆ ಗೊತ್ತಿಲ್ಲ. ಜನರ ಆಶಿರ್ವಾದವಿರುವರೆರೆಗೂ ಇರುತ್ತೇನೆ ಎಂದು ತಿಳಿಸಿದರು .

ಹಾವೇರಿ ವೈದ್ಯಕೀಯ ಕಾಲೇಜು ಪೂರ್ಣಗೊಂಡಿದ್ದು, ಇದಕ್ಕೆ ಸುಮಾರು 500 ಕೋಟಿಗಳು ವೆಚ್ಚವಾಗಿದೆ. ಇದನ್ನು ನಾನೇ ಘೋಷಣೆ ಮಾಡಿದ್ದೆ ಹಾಗೂ ಉದ್ಘಾಟನೆಯನ್ನು ನಾನೇ ಮಾಡುತ್ತಿದ್ದೇನೆ. ಈಗಾಗಲೇ ಮೂರನೇ ಬ್ಯಾಚ್ ನಡೆಯುತ್ತಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿದ್ದರಾಮಯ್ಯ ಅವರ ಸರ್ಕಾರ ಬೊಕ್ಕಸ ಖಾಲಿ ಮಾಡಿದೆ ಎಂಬ ವಿಪಕ್ಷ ಬಿಜೆಪಿ ನಾಯಕರ ಆರೋಪಕ್ಕೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು ಎಂದರು.

For Latest News Updates, Join Our Whatsapp Community🚩
RELATED ARTICLES

Most Popular