HomeLatest Newsಪತಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ

ಪತಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ

ಹಾವೇರಿ: ಪತಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಇಸ್ಲಾಂಪುರ ಓಣಿಯಲ್ಲಿ ನಡೆದಿದೆ.

ಸೀಮಾ ಭಾನು ಕಂಬಳಿ (25) ಆತ್ಮಹತ್ಯೆಗೆ ಶರಣಾದ ಮಹಿಳೆ. ಪತಿ ಅಬ್ರಾರ ಕಂಬಳಿಗೆ ಬೇರೆ ಮಹಿಳೆ ಜೊತೆ ಅನೈತಿಕ ಸಂಬಂಧ ಇರುವುದಕ್ಕೆ ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಪತಿ ಹಾಗೂ ಆತನ ಕುಟುಂಬಸ್ಥರು ವರದಕ್ಷಿಣಿಗಾಗಿ ಸೀಮಾ ಭಾನುಗೆ ಕಿರುಕುಳ ಕೂಡ ನೀಡುತ್ತಿದ್ದರಂತೆ. ಕಿರುಕುಳ ತಾಳದೆ ಸೀಮಾ 10 ದಿನದ ಹಿಂದೆ ವಿಷ ಸೇವಿಸಿದ್ದಳು. ತೀವ್ರವಾಗಿ ಅಸ್ವಸ್ಥಗೊಂಡಿದ್ದ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಇಂದು ಸಾವನ್ನಪ್ಪಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಳೆದ ಮೂರು ವರ್ಷಗಳ ಹಿಂದೆ ಸೀಮಾ ಭಾನು ಕಂಬಳಿಯನ್ನು ಅಬ್ರಾರನಿಗೆ ಮದುವೆ ಮಾಡಿಕೊಡಲಾಗಿತ್ತು. ಆಗಿಂದಲೂ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡುತ್ತಿದ್ದ. ಪ್ರಕರಣ ಸಂಬಂಧ 6 ಜನರ ವಿರುದ್ಧ ರಾಣೇಬೆನ್ನೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿ ಪತಿ ಹಾಗೂ ಕುಟುಂಬದವರನ್ನು ಬಂಧಿಸುವಂತೆ ಸೀಮಾ ಭಾನು ಪೋಷಕರು ಒತ್ತಾಯಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular