HomeKarnatakaಬೆಳಗಿನಜಾವ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಬೆಳಗಿನಜಾವ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ: 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಹಾವೇರಿ: ಖಾಸಗಿ ಬಸ್ ಪಲ್ಟಿಯಾಗಿ 15ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಹಾವೇರಿ ತಾಲೂಕಿನ ವರದಾಹಳ್ಳಿ ಸಮೀಪ ನಡೆದಿದೆ.

ಬೆಂಗಳೂರಿನಿಂದ ಹುಬ್ಬಳ್ಳಿ ಮಾರ್ಗವಾಗಿ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಹಾವೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಮುಂಜಾನೆ 4 ಗಂಟೆಗೆ ಅಪಘಾತ ಸಂಭವಿಸಿದೆ. ಹಾವೇರಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular