HomeIndiaಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಭರ್ಜರಿ ಸುದ್ದಿ: ಸರ್ಕಾರಿ ನೌಕರರಿಗೆ ಸಮನಾಗಿ ಪರಿಗಣಿಸಲು ಹೈಕೋರ್ಟ್ ಆದೇಶ

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಭರ್ಜರಿ ಸುದ್ದಿ: ಸರ್ಕಾರಿ ನೌಕರರಿಗೆ ಸಮನಾಗಿ ಪರಿಗಣಿಸಲು ಹೈಕೋರ್ಟ್ ಆದೇಶ

ಅಹಮದಾಬಾದ್: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರನ್ನು ಕಾಯಂ ಹುದ್ದೆಯಲ್ಲಿರುವ ಸರ್ಕಾರಿ ನೌಕರರಿಗೆ ಸಮನಾಗಿ ಪರಿಗಣಿಸಬೇಕು ಎಂದು ಗುಜರಾತ್ ಹೈ ಕೋರ್ಟ್ ಆದೇಶ ನೀಡಿದೆ.

ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಕ್ಕೆ ಈ ಕುರಿತಾಗಿ ಸೂಚನೆ ನೀಡಲಾಗಿದ್ದು, ಈ ಆದೇಶ ದೇಶಾದ್ಯಂತ ಇರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಅನುಕೂಲವಾಗಲಿದೆ ಎಂದು ಹೇಳಲಾಗಿದೆ.

ಸರ್ಕಾರಿ ನೌಕರರೊಂದಿಗೆ ಹೋಲಿಸಿದಾಗ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕರಿಗೆ ತಾರತಮ್ಯವಾಗುತ್ತಿದೆ ಎಂಬುದು ಸ್ಪಷ್ಟವಾಗಿದೆ ಎಂದು ನ್ಯಾಯಮೂರ್ತಿ ನಿಖಿಲ್ ಎಸ್. ಕರಿಯೆಲ್ ಅವರು ಆದೇಶದಲ್ಲಿ ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಹುದ್ದೆಗಳನ್ನು ಸರ್ಕಾರಿ ಸೇವೆಯಲ್ಲಿ ಸೇರ್ಪಡೆ ಮಾಡಲು ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಜಂಟಿಯಾಗಿ ನೀತಿಯೊಂದನ್ನು ರೂಪಿಸಬೇಕು. ಅದರ ಪರಿಣಾಮ ಅವರಿಗೆ ಸಿಗುವ ಪ್ರಯೋಜನಗಳನ್ನು ಒದಗಿಸಬೇಕು ಎಂದು ಸೂಚಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular