HomeKarnatakaಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರ ಚುನಾವಣಾ ರಾಜಕೀಯ ಜೂನ್‌ಗೆ ಅಂತ್ಯ!

ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರ ಚುನಾವಣಾ ರಾಜಕೀಯ ಜೂನ್‌ಗೆ ಅಂತ್ಯ!

ಮಾಜಿ ಪ್ರಧಾನಿ, ಜೆಡಿಎಸ್ ಪಕ್ಷದ ವರಿಷ್ಠ ಹೆಚ್.ಡಿ.ದೇವೇಗೌಡರ ಚುನಾವಣಾ ರಾಜಕೀಯ ಜೂನ್‌ನಲ್ಲಿ ಅಂತ್ಯವಾಗಲಿದೆ. ಹಾಲಿ ರಾಜ್ಯಸಭಾ ಸದಸ್ಯರಾಗಿರುವ 92 ವರ್ಷದ ದೇವೇಗೌಡ ಸದಸ್ಯತ್ವ ಜೂನ್‌ನಲ್ಲಿ ಅಂತ್ಯಗೊಳ್ಳಲಿದೆ. ಅವರನ್ನು ರಾಜ್ಯಸಭೆಗೆ ಮರು ಆಯ್ಕೆ ಮಾಡುವಷ್ಟು ಸಂಖ್ಯಾಬಲವನ್ನು ಪಕ್ಷ ಹೊಂದಿಲ್ಲ. ಆದ್ದರಿಂದ ದೇವೇಗೌಡರ 6 ದಶಕದ ಚುನಾವಣಾ ರಾಜಕೀಯ ಅಂತ್ಯವೇ? ಎಂಬ ಪ್ರಶ್ನೆ ಎದುರಾಗಿದೆ.

ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ಮಲ್ಲಿಕಾರ್ಜುನ ಖರ್ಗೆ, ಹೆಚ್.ಡಿ.ದೇವೇಗೌಡ ಸೇರಿ ನಾಲ್ವರ ಸದಸ್ಯತ್ವ ಜೂನ್‌ನಲ್ಲಿ ಅಂತ್ಯವಾಗಲಿದೆ. ರಾಜ್ಯಸಭೆ ವಿಪಕ್ಷನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪುನರಾಯ್ಕೆ ಮಾಡುವಷ್ಟು ಶಾಸಕರ ಬಲ ಕಾಂಗ್ರೆಸ್ ಪಕ್ಷದಲ್ಲಿದೆ.

2020ರಲ್ಲಿಯೂ ಜೆಡಿಎಸ್ ಪಕ್ಷದ ಬಳಿ ಶಾಸಕರ ಬಲ ಇರಲಿಲ್ಲ. ಆದರೆ 2019ರ ಲೋಕಸಭೆ ಚುಣಾವಣೆಯಲ್ಲಿ ತುಮಕೂರಿನಲ್ಲಿ ಸೋತಿದ್ದ ಹೆಚ್.ಡಿ.ದೇವೇಗೌಡರನ್ನು ರಾಜ್ಯಸಭೆಗೆ ಕರ್ನಾಟಕ ವಿಧಾನಸಭೆಯಿಂದ ಆಯ್ಕೆ ಮಾಡಲಾಗಿತ್ತು. ಆಗ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಸೂಚನೆಯಂತೆ ಕರ್ನಾಟಕದ ಕಾಂಗ್ರೆಸ್ ಶಾಸಕರು ದೇವೇಗೌಡ ಪರವಾಗಿ ಮತದಾನ ಮಾಡಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆದರೆ ಈಗ ರಾಜ್ಯದ ರಾಜಕೀಯ ಚಿತ್ರಣ ಬದಲಾಗಿದೆ. ಜೆಡಿಎಸ್ ಪಕ್ಷ ವಿಧಾನಸಭೆಯಲ್ಲಿ ಹೊಂದಿರುವುದು ಕೇವಲ 18 ಶಾಸಕರ ಬಲ. ಅಲ್ಲದೇ ಜೆಡಿಎಸ್ ಪಕ್ಷ ಎನ್‌ಡಿಎ ಮೈತ್ರಿಕೂಟ ಸೇರಿ, ಬಿಜೆಪಿ ಬೆಂಬಲಿಸಿರುವ ಕಾರಣ ಕಾಂಗ್ರೆಸ್ ಪಕ್ಷ ಜೆಡಿಎಸ್ ಬೆಂಬಲಿಸುವುದಿಲ್ಲ. ಆದ್ದರಿಂದ ದೇವೇಗೌಡರ ರಾಜ್ಯಸಭೆ ಮರು ಆಯ್ಕೆ ಬಗ್ಗೆ ಪ್ರಶ್ನೆಗಳು ಎದ್ದಿದೆ.

ಬಿಜೆಪಿಯ ಬೆಂಬಲ: ಕರ್ನಾಟಕ ವಿಧಾನಸಭೆಯಿಂದ ಆಯ್ಕೆಯಾದ 4 ರಾಜ್ಯಸಭಾ ಸದಸ್ಯರ ಅವಧಿ ಮುಕ್ತಾಯಗೊಳ್ಳಲಿದೆ. ಮೂವರು ಸದಸ್ಯರನ್ನು ಆಯ್ಕೆ ಮಾಡುವಷ್ಟು ಸಂಖ್ಯಾಬಲವನ್ನು ಕಾಂಗ್ರೆಸ್ ಹೊಂದಿದೆ.

ಬಿಜೆಪಿ ಮತ್ತು ಜೆಡಿಎಸ್ ಸೇರಿ ಇರುವ ಒಟ್ಟು ಸಂಖ್ಯೆ 84. ಇದರಲ್ಲಿ ಬಿಜೆಪಿಯ ಇಬ್ಬರು ಶಾಸಕರು ಕಾಂಗ್ರೆಸ್‌ ಜೊತೆ ಗುರುತಿಸಿಕೊಂಡಿದ್ದಾರೆ. ಬಿಜೆಪಿ ಬೆಂಬಲ ನೀಡಿದರೆ ಮಾತ್ರ ರಾಜ್ಯಸಭೆಗೆ ದೇವೇಗೌಡರು ಮರು ಆಯ್ಕೆ ಆಗಬಹುದು. ಇಲ್ಲವಾದಲ್ಲಿ ಚುನಾವಣಾ ರಾಜಕೀಯ ಅಂತ್ಯವಾಗಲಿದೆ.

ಬಿಜೆಪಿ ಹೈಕಮಾಂಡ್ ನಾಯಕರು, ಪ್ರಧಾನಿ ನರೇಂದ್ರ ಮೋದಿ ಜೊತೆ ಉತ್ತಮ ಸಂಬಂಧ ಹೊಂದಿರುವ ದೇವೇಗೌಡರು ಮನಸ್ಸು ಮಾಡಿದರೆ ಮರು ಆಯ್ಕೆ ಕಷ್ಟವಲ್ಲ. ಆದರೆ ಆರೋಗ್ಯದ ಕಾರಣ ಅವರು ನಿರಾಕರಿಸಬಹುದು ಎಂಬ ಸುದ್ದಿಗಳು ಕೇಳಿ ಬರುತ್ತಿವೆ.

11ನೇ ಪ್ರಧಾನಿಯಾಗಿದ್ದಾಗ ಮೊದಲ ಬಾರಿಗೆ ದೇವೇಗೌಡರು ರಾಜ್ಯಸಭಾ ಸದಸ್ಯರಾಗಿದ್ದರು. 2020ರಲ್ಲಿ 2ನೇ ಅವಧಿಗೆ ಅವರು ರಾಜ್ಯಸಭೆಗೆ ಆಯ್ಕೆಯಾದರು. ಹಾಸನ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗುತ್ತಿದ್ದ ದೇವೇಗೌಡರು 2019ರ ಚುನಾವಣೆಯಲ್ಲಿ ಕ್ಷೇತ್ರವನ್ನು ಮೊಮ್ಮಗ ಪ್ರಜ್ವಲ್ ರೇವಣ್ಣಗೆ ಬಿಟ್ಟುಕೊಟ್ಟರು.

ತುಮಕೂರು ಕ್ಷೇತ್ರದಿಂದ ಕಾಂಗ್ರೆಸ್-ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದು 582,788 ಮತಗಳನ್ನು ಪಡೆದು ಬಿಜೆಪಿಯ ಜಿ.ಎಸ್.ಬಸವರಾಜು ವಿರುದ್ಧ ಸೋತರು. ಬಳಿಕ ಕರ್ನಾಟಕದಲ್ಲಿಯೂ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನಗೊಂಡಿತು. 2024ರ ಲೋಕಸಭೆ ಚುನಾವಣೆ ಹೊತ್ತಿಗೆ ಜೆಡಿಎಸ್ ಎನ್‌ಡಿಎ ಮೈತ್ರಿಕೂಟ ಸೇರಿದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular