HomeKarnatakaಮಾಜಿ ಪ್ರಧಾನಿ ದೇವೇಗೌಡರು, ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಶಾಂತ್ ಸಂಬರಗಿ ವಿರುದ್ಧ ದೂರು

ಮಾಜಿ ಪ್ರಧಾನಿ ದೇವೇಗೌಡರು, ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಶಾಂತ್ ಸಂಬರಗಿ ವಿರುದ್ಧ ದೂರು

ಬೆಂಗಳೂರು: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠರಾದ ಹೆಚ್.ಡಿ. ದೇವೇಗೌಡರು ಮತ್ತು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ಪ್ರಶಾಂತ್ ಸಂಬರಗಿ ಜಾಲತಾಣಗಳಲ್ಲಿ ಅವಹೇಳನಕಾರಿ ಮತ್ತು ಮಾನಹಾನಿಕಾರಿ ಪೋಸ್ಟ್ ಹಾಕಿದ್ದಾರೆ ಎಂದು ಆರೋಪಿಸಿ ದೂರು ನೀಡಲಾಗಿದೆ.

ಜೆಡಿಎಸ್ ಕಾನೂನು ಘಟಕದ ರಾಜ್ಯಾಧ್ಯಕ್ಷ ಎ.ಪಿ. ರಂಗನಾಥ್ ಬೆಂಗಳೂರು ನಗರದ ಸೈಬರ್ ಅಪರಾಧ ವಿಭಾಗದ ಮುಖ್ಯಸ್ಥರಿಗೆ ದೂರು ನೀಡಿದ್ದಾರೆ. ಫೇಸ್ ಬುಕ್ ಖಾತೆಯಲ್ಲಿ ಪ್ರಶಾಂತ್ ಸಂಬರಗಿ ಅವರು ಜೆಡಿಎಸ್ ಪಕ್ಷದ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿ ಸಾರ್ವಜನಿಕವಾಗಿ ತೇಜೋವಧೆ ಮಾಡಿದ್ದು, ಅವರನ್ನು ತಕ್ಷಣವೇ ಬಂಧಿಸಿ ರಾಜ್ಯದಿಂದ ಗಡಿಪಾರು ಮಾಡಬೇಕು. ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ದೂರು ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಾರ್ಚ್ 25ರಂದು ಪ್ರಶಾಂತ್ ಸಂಬರಗಿ ದೇವೇಗೌಡರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದಾರೆ. ಮಾರ್ಚ್ 11 ಮತ್ತು 15ರಂದು ಕೂಡ ಅವಹೇಳನಕಾರಿ ಪೋಸ್ಟ್ ಮಾಡಿದ್ದಾರೆ. ಮಾರ್ಚ್ 13ರಂದು ಕುಮಾರಸ್ವಾಮಿಯವರ ಸಾರ್ವಜನಿಕ ಭಾಷಣದ ತುಣುಕನ್ನು ಪೋಸ್ಟ್ ಮಾಡಿ ಅವಮಾನಿಸಿದ್ದಾರೆ. ಅವರ ವಿರುದ್ಧ ಕ್ರಮ ಜರುಗಿಸಬೇಕೆಂದು ಎಂದು ದೂರು ನೀಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular