HomeKarnatakaಪ್ರಜಾಪ್ರಭುತ್ವ ಉಳಿಸುವ ಕಾಳಜಿ ಇದ್ದರೆ ಪಂಚಾಯಿತಿ ಚುನಾವಣೆ ನಡೆಸಿ: ಹೆಚ್.ಡಿ.ಕೆ. ಟಾಂಗ್

ಪ್ರಜಾಪ್ರಭುತ್ವ ಉಳಿಸುವ ಕಾಳಜಿ ಇದ್ದರೆ ಪಂಚಾಯಿತಿ ಚುನಾವಣೆ ನಡೆಸಿ: ಹೆಚ್.ಡಿ.ಕೆ. ಟಾಂಗ್

ಬೆಂಗಳೂರು: ಮಾನವ ಸರಪಳಿ ನೆಪದಲ್ಲಿ ರಾಜ್ಯ ಸರ್ಕಾರ ಪುಕ್ಕಟೆ ಪ್ರಚಾರ ಗಿಟ್ಟಿಸಿದ್ದು, ಅದರಿಂದ ಪ್ರಜಾಪ್ರಭುತ್ವ ಉಳಿಯುತ್ತದೆಯೇ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಸರ್ಕಾರಕ್ಕೆ ಪ್ರಜಾಪ್ರಭುತ್ವ ಉಳಿಸುವ ಕಾಳಜಿಗೆ ಇಲ್ಲ, ಒಂದು ವೇಳೆ ಅಂತಹ ಕಾಳಜಿ ಇದ್ದರೆ ಮೊದಲು ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಿ ಎಂದು ಹೇಳಿದ್ದಾರೆ.

ಮಾನವ ಸರಪಳಿ ನೆಪದಲ್ಲಿ ಪುಕ್ಕಟೆ ಪ್ರಚಾರ ಗಿಟ್ಟಿಸಿದ ರಾಜ್ಯ ಕಾಂಗ್ರೆಸ್  ಸರ್ಕಾರಕ್ಕೆ ಪ್ರಜಾಪ್ರಭುತ್ವ ಉಳಿಸುವ ಕಾಳಜಿಯೇ ಇಲ್ಲ. ಇದ್ದರೆ ಮೊದಲು ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಿ. ಅಧಿಕಾರಕ್ಕೇರಿದಾಗಿನಿಂದ ಪ್ರಜಾಪ್ರಭುತ್ವದ ಸರಪಳಿಯ ತಳಮಟ್ಟದ ಆಧಾರಸ್ತಂಭಗಳಾದ ಜಿಲ್ಲಾ & ತಾಲೂಕು ಪಂಚಾಯತಿ ಮತ್ತು ಬಿಬಿಎಂಪಿ ಚುನಾವಣೆ ನಡೆಸಿಲ್ಲ, ಯಾಕೆ? ಸ್ಥಳೀಯ ಸರ್ಕಾರಗಳ ಕತ್ತು ಹಿಸುಕಿ ನೀವು ವಿಧಾನಸೌಧದಲ್ಲಿ ಮೆರೆದರೇನು ಭಾಗ್ಯ? ಎಂದು ಪ್ರಶ್ನಿಸಿದ್ದಾರೆ.

ಸಿದ್ಧರಾಮಯ್ಯನವರೇ.. ನೀವು ಅಧಿಕಾರಕ್ಕೆ ಬಂದು ವರ್ಷದ ಮೇಲೆ 4 ತಿಂಗಳಾಯಿತು(2023 ಮೇ 20). ಈವರೆಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಸಾಧ್ಯವಾಗಿಲ್ಲ. ನಿಮ್ಮ ಪ್ರಜಾಪ್ರಭುತ್ವ, ಜನಪರತೆ, ಜಾಹೀರಾತುಗಳಲ್ಲಷ್ಟೆ ಝಗಮಗಿಸುತ್ತಿದೆ. ನಿಮ್ಮದು ಪ್ರಚಾರ ಜಾಸ್ತಿ, ಆಚಾರ ನಾಸ್ತಿ ಎಂದು ಟೀಕಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಚ್ಚಿಧ್ರ ಶಕ್ತಿಗಳನ್ನು ದಮನ ಮಾಡುವುದು ಎಂದರೆ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ತತ್ವಕ್ಕೆ ತಿಲಾಂಜಲಿ ಇಡುವುದೇ? ಮಾನವ ಸರಪಳಿಯಿಂದ ಪ್ರಜಾಪ್ರಭುತ್ವ ಉಳಿಯುತ್ತದೆಯೇ? ಜನರ ತೆರಿಗೆ ಹಣದ ಪೋಲು ಪ್ರಜಾಪ್ರಭುತ್ವಕ್ಕೆ ಭೂಷಣವೇ? ಮೊದಲು ಸ್ಥಳೀಯ ಸಂಸ್ಥೆ ಚುನಾವಣೆ ಘೋಷಿಸಿ. ನೈಜ ಪ್ರಜಾಪ್ರಭುತ್ವದ ಸರಪಳಿಯನ್ನು ಗಟ್ಟಿಗೊಳಿಸಿ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular