BIG NEWS : ಮಾಜಿ ಪ್ರಧಾನಿ ‘ಮನಮೋಹನ್ ಸಿಂಗ್’ ನಿಧನಕ್ಕೆ H.D ಕುಮಾರಸ್ವಾಮಿ ಸಂತಾಪ

ಬೆಂಗಳೂರು : ಮಾಜಿ ಪ್ರಧಾನಿ ‘ಮನಮೋಹನ್ ಸಿಂಗ್’ ನಿಧನಕ್ಕೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.

ಭಾರತದ ಮಾಜಿ ಪ್ರಧಾನಮಂತ್ರಿಗಳು, ಪ್ರಖ್ಯಾತ ವಿತ್ತತಜ್ಞರು, ಆರ್ಥಿಕ ಸುಧಾರಣೆಗಳ ಹರಿಕಾರರೂ ಆಗಿದ್ದ ಡಾ.ಮನಮೋಹನ್ ಸಿಂಗ್ ಅವರ ನಿಧನದ ವಾರ್ತೆ ಕೇಳಿ ಬಹಳ ದುಃಖವಾಯಿತು. ದೂರದೃಷ್ಟಿ, ಸಂಯಮ ಮತ್ತು ತಮ್ಮ ಆರ್ಥಿಕ ಮೇದಸ್ಸಿನಿಂದ ರಾಷ್ಟ್ರವನ್ನು ದುರಿತ ಕಾಲದಲ್ಲಿ ಸಶಕ್ತವಾಗಿ ಮುನ್ನಡೆಸಿದ್ದ ಮನಮೋಹನ್ ಸಿಂಗ್ ಅವರು ದೇಶಕ್ಕೆ ನೀಡಿರುವ ಕೊಡುಗೆ ಅಪಾರ. ಆರ್ಥಿಕ ಸುಧಾರಣೆಗಳ ಮೂಲಕ ಭಾರತಕ್ಕೆ ಜಾಗತಿಕ ಮನ್ನಣೆ ತಂದುಕೊಟ್ಟವರು.

ಅವರು. ಅವರ ಕೊಡುಗೆಗಳು ಚಿರಸ್ಮರಣೀಯ. ಶ್ರೀಯುತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read