HomeKarnatakaBIG NEWS: ಅಕ್ರಮಗಳಿಂದ ಪಾರಾಗಲು 50 ಶಾಸಕರೊಂದಿಗೆ ಕಾಂಗ್ರೆಸ್ ಪ್ರಭಾವಿ ನಾಯಕ ಬಿಜೆಪಿಗೆ: ಮಾಜಿ ಸಿಎಂ...

BIG NEWS: ಅಕ್ರಮಗಳಿಂದ ಪಾರಾಗಲು 50 ಶಾಸಕರೊಂದಿಗೆ ಕಾಂಗ್ರೆಸ್ ಪ್ರಭಾವಿ ನಾಯಕ ಬಿಜೆಪಿಗೆ: ಮಾಜಿ ಸಿಎಂ HDK ಹೊಸ ಬಾಂಬ್

ಹಾಸನ: ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರೊಬ್ಬರು 50 ಶಾಸಕರನ್ನು ಕರೆ ತರುವ ಬಗ್ಗೆ ಬಿಜೆಪಿ ನಾಯಕರೊಂದಿಗೆ ದೆಹಲಿಯಲ್ಲಿ ಚರ್ಚೆ ನಡೆಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.

ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಅಕ್ರಮಗಳಿಂದ ಪಾರಾಗಲು ಬಿಜೆಪಿ ಕೇಂದ್ರ ನಾಯಕರೊಂದಿಗೆ ಚೌಕಾಸಿ ನಡೆಸುತ್ತಿರುವ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಪ್ರಭಾವಿ ಸಚಿವರೊಬ್ಬರು 50 ಶಾಸಕರೊಂದಿಗೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ಸಜ್ಜಾಗಿದ್ದಾರೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಷ್ಟ್ರಮಟ್ಟದ ಬಿಜೆಪಿ ನಾಯಕರೊಂದಿಗೆ ಚರ್ಚೆ ನಡೆಸುತ್ತಿರುವ ರಾಜ್ಯದ ಕಾಂಗ್ರೆಸ್ ನಾಯಕರು ಯಾರು ಎಂಬ ಬಗ್ಗೆ ಪ್ರತಿಕ್ರಿಯೆ ನೀಡಿದ ಕುಮಾರಸ್ವಾಮಿ, ಸಣ್ಣ ಪುಟ್ಟ ನಾಯಕರು 50 -60 ಶಾಸಕರನ್ನು ಕರೆದುಕೊಂಡು ಬರಲು ಆಗುತ್ತಾ ಎಂದು ಪ್ರಶ್ನಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ವಾಗ್ದಾಳಿ ನಡೆಸಿದ ಬಗ್ಗೆ ಪ್ರತಿಕ್ರಿಯೆ ನೀಡಿದ ಕುಮಾರಸ್ವಾಮಿ, ಹರಿಪ್ರಸಾದ್ ಒಬ್ಬರೇ ಅಲ್ಲ, ಇನ್ನೂ ಸಾಕಷ್ಟು ಜನ ಇದ್ದಾರೆ. ಒಂದೊಂದೇ ಧ್ವನಿ ಹೊರ ಬರುತ್ತದೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular