HomeKarnatakaತಡರಾತ್ರಿ ಬೆಂಗಳೂರಿಗೆ ಬರುತ್ತಿದ್ದಂತೆ ಕಾಂಗ್ರೆಸ್ ಮೇಲೆ ಮುಗಿಬಿದ್ದ ಹೆಚ್.ಡಿ.ಕೆ.

ತಡರಾತ್ರಿ ಬೆಂಗಳೂರಿಗೆ ಬರುತ್ತಿದ್ದಂತೆ ಕಾಂಗ್ರೆಸ್ ಮೇಲೆ ಮುಗಿಬಿದ್ದ ಹೆಚ್.ಡಿ.ಕೆ.

ಬೆಂಗಳೂರು: ಮಾಜಿ ಸಿಎಂ, ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ಅವರು ಕುಟುಂಬ ಸಮೇತ ಯುರೋಪ್ ಪ್ರವಾಸ ಮುಗಿಸಿ ತಡರಾತ್ರಿ ಬೆಂಗಳೂರಿಗೆ ವಾಪಸ್ ಆಗಿದ್ದಾರೆ.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ವಿರುದ್ಧ ಸಿಂಗಾಪೂರದಲ್ಲಿ ಷಡ್ಯಂತ್ರ ಎಂಬ ಡಿಸಿಎಂ ಡಿ.ಕೆ. ಶಿವಕುಮಾರ್ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಯುರೋಪ್ ಪ್ರವಾಸಕ್ಕೆ ತೆರಳಿದ್ದನ್ನು ಸಿಂಗಾಪುರಕ್ಕೆ ಹೋಗಿದ್ದೆ. ಅಲ್ಲಿ ಸರ್ಕಾರ ಕೆಡವಲು ಷಡ್ಯಂತ್ರ ನಡೆಸಿದ್ದೆ ಎಂದು ಹೇಳುತ್ತಾರೆ. ನಾನು ಕುಟುಂಬದವರೊಂದಿಗೆ ಯುರೋಪ್ ಪ್ರವಾಸಕ್ಕೆ ಹೋಗಿದ್ದೆ. ಅವರಿಗೆ ನನ್ನ ಬಗ್ಗೆ ಇನ್ನೂ ಭಯ, ಆತಂಕವಿದೆ ಎಂಬುದನ್ನು ಕಾಣಬಹುದು. ಅವರು ಕುತಂತ್ರ ಮಾಡುತ್ತಾರೆ. ಕೃತಕವಾದ ಶಕ್ತಿ ಚುನಾವಣೆಯಲ್ಲಿ ತುಂಬಿಕೊಂಡಿದ್ದಾರೆ. ಅದು ಬಹಳ ದಿನ ಇರುವುದಿಲ್ಲ ಎಂದು ಹೆಚ್.ಡಿ.ಕೆ. ಹೇಳಿದ್ದಾರೆ.

ಗುತ್ತಿಗೆದಾರರಿಗೆ ದುಡ್ಡು ಇದ್ದರೆ ಒಳಗೆ ಬನ್ನಿ ಎನ್ನುತ್ತಾರೆ. ಇವರಿಂದ ಪಾರದರ್ಶಕ ಆಡಳಿತ ಸಾಧ್ಯವೇ? ಭ್ರಷ್ಟಾಚಾರ ನಿಲ್ಲಿಸಿ ಪಾರದರ್ಶಕ ಆಡಳಿತ ನೀಡುತ್ತಾರೆಯೇ? ಈಸ್ಟ್ ಇಂಡಿಯಾ ಕಂಪನಿ ಭಾರತ ಬಿಟ್ಟು ಹೋಗಿದೆ. ಬ್ರಿಟೀಷರ ವಸೂಲಿ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೆಹಲಿಗೆ ಹೋಗಿ ರಾಹುಲ್ ಗಾಂಧಿ ಅವರ ಎದುರು ಪಾರದರ್ಶಕ ಆಡಳಿತದ ಬಗ್ಗೆ ಹೇಳುತ್ತಾರೆ. ಇಲ್ಲಿ ಚೇಲಾಗಳನ್ನು ಇಟ್ಟುಕೊಂಡು ಭ್ರಷ್ಟಾಚಾರ ನಡೆಸುತ್ತಿದ್ದಾರೆ. ಗುತ್ತಿಗೆದಾರರಿಂದ ಪರ್ಸೆಂಟೇಜ್ ಪಡೆಯಲು ಮುಂದಾಗಿದ್ದಾರೆ ಎಂದು ಗುಡುಗಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular