ಬಿಜೆಪಿ ನಾಯಕರ ಎದುರಲ್ಲೇ ಯೋಗೇಶ್ವರ್ ವಿರುದ್ಧ HDK ಆಕ್ರೋಶ

ನವದೆಹಲಿ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಟಿಕೆಟ್ ಸಿಗದಿದ್ದರೆ ಬಂಡಾಯವಾಗಿ ಅಥವಾ ಬೇರೆ ಪಕ್ಷದಿಂದ ಸ್ಪರ್ಧಿಸುವುದಾಗಿ ಬಹಿರಂಗ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗಿದೆ.

ಬಿಜೆಪಿ ನಾಯಕರ ಎದುರಲ್ಲೇ ಯೋಗೇಶ್ವರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಕುಮಾರಸ್ವಾಮಿ ಅವರನ್ನು ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಮತ್ತು ವಿ. ಸೋಮಣ್ಣ ಸಮಾಧಾನಪಡಿಸಿದ್ದಾರೆ. ಪ್ರಹ್ಲಾದ್ ಜೋಶಿಯವರ ದೆಹಲಿ ನಿವಾಸದಲ್ಲಿ ಗುರುವಾರ ಕೂಡ ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ಮೈತ್ರಿ ಅಭ್ಯರ್ಥಿಯ ಆಯ್ಕೆ ಸಂಬಂಧ ಬಿಜೆಪಿ ಮತ್ತು ಜೆಡಿಎಸ್ ನಾಯಕರ ಸಭೆ ನಡೆದಿದೆ.

ಸಭೆಯಲ್ಲಿ ಹೆಚ್.ಡಿ. ಕುಮಾರಸ್ವಾಮಿ, ಆರ್. ಅಶೋಕ್, ವಿ. ಸೋಮಣ್ಣ, ಬಸವರಾಜ ಬೊಮ್ಮಾಯಿ, ಅಶ್ವತ್ಥ್ ನಾರಾಯಣ, ಸಿ.ಟಿ. ರವಿ, ಅರವಿಂದ್ ಬೆಲ್ಲದ್ ಮೊದಲಾದ ನಾಯಕರು ಭಾಗವಹಿಸಿದ್ದರು. ಸಭೆಯಲ್ಲಿ ಸಿ.ಪಿ. ಯೋಗೇಶ್ವರ್ ಗೆ ಟಿಕೆಟ್ ನೀಡುವ ಕುರಿತಾಗಿ ಚರ್ಚೆ ನಡೆದಿದೆ.

ಇತ್ತೀಚೆಗೆ ಯೋಗೇಶ್ವರ್ ಅವರ ಹೇಳಿಕೆಗಳ ಕುರಿತಾಗಿ ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಳಿಕ ಚನ್ನಪಟ್ಟಣದಲ್ಲಿ ಮೈತ್ರಿ ಅಭ್ಯರ್ಥಿ ಕಣಕ್ಕಿಳಿಸುವ ಬಗ್ಗೆ ನಾಯಕರು ತೀರ್ಮಾನ ಕೈಗೊಂಡಿದ್ದಾರೆ. ಶುಕ್ರವಾರ ರಾಜ್ಯ ಬಿಜೆಪಿ ನಾಯಕರು ಜೆ.ಪಿ. ನಡ್ಡಾ, ಬಿ.ಎಲ್. ಸಂತೋಷ್ ಸೇರಿ ವರಿಷ್ಠರನ್ನು ಭೇಟಿ ಮಾಡುವ ಸಾಧ್ಯತೆ ಇದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read