ಮೂಗಿನಲ್ಲಿ ದಿಢೀರ್ ರಕ್ತಸ್ರಾವ: ಚಿಕಿತ್ಸೆ ಬಳಿಕ HDK ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಂಗಳೂರು: ಸುದ್ದಿಗೋಷ್ಠಿ ವೇಳೆ ದಿಢೀರ್ ರಕ್ತಸ್ರಾವವಾಗಿ ಬೆಂಗಳೂರಿನ ಜಯನಗರ ಆಸ್ಪತ್ರೆಗೆ ದಾಖಲಾಗಿದ್ದೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಅಪೋಲೋ ಆಸ್ಪತ್ರೆಯಲ್ಲಿ ನಾಲ್ಕು ಗಂಟೆ ಚಿಕಿತ್ಸೆ ಪಡೆದ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ವೇಳೆ ಮಾತನಾಡಿದ ಅವರು, ನನಗೆ ಮೂರು ಸಲ ಹೃದಯದ ವಾಲ್ವ್ ಬದಲಾವಣೆಯಾಗಿದೆ. ಒತ್ತಡ, ವಿಶ್ರಾಂತಿ ಇಲ್ಲದೆ ಕೆಲಸ ಮಾಡಿದ್ದರಿಂದ ಹೀಗೆ ಆಗಿದೆ ಬೆಂಗಳೂರಿನಿಂದ ಮೈಸೂರು ಪಾದಯಾತ್ರೆಗೆ ಇನ್ನೂ ಒಂದು ವಾರ ಇದೆ. ಪಾದಯಾತ್ರೆಯಲ್ಲಿ ಭಾಗವಹಿಸುವ ಬಗ್ಗೆ ಆಮೇಲೆ ನೋಡೋಣ ಎಂದು ಹೇಳಿದ್ದಾರೆ.

ಯಾರೂ ಆತಂಕ ಪಡುವ ಅಗತ್ಯವಿಲ್ಲ. ವಿಶ್ರಾಂತಿಗೆ ವೈದ್ಯರು ಸಲಹೆ ನೀಡಿದ್ದಾರೆ. ನನ್ನ ಆರೋಗ್ಯ ಸಂಪೂರ್ಣವಾಗಿ ಹದಗೆಟ್ಟಿಲ್ಲ, ಭಗವಂತನ ಆಶೀರ್ವಾದ ಇದೆ. ಒತ್ತಡ ಕಡಿಮೆ ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ದಾರೆ. ರಾಜ್ಯದ ಜನರ ಕೆಲಸ ಮಾಡಲು ವಿಶ್ರಾಂತಿ ಇಲ್ಲದೇ ಓಡಾಡಿದ್ದರಿಂದ ಹೀಗೆ ಆಗಿದೆ ಎಂದಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read