HomeKarnatakaBREAKING: ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಎಫ್ಐಆರ್

BREAKING: ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಎಫ್ಐಆರ್

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಅನಧಿಕೃತವಾಗಿ ವಿದ್ಯುತ್ ಬಳಕೆ ಆರೋಪದಡಿ ಅವರ ವಿರುದ್ಧ ಬೆಸ್ಕಾಂನಿಂದ ಎಫ್ಐಆರ್ ದಾಖಲಿಸಲಾಗಿದೆ.

ಕುಮಾರಸ್ವಾಮಿಯವರ ನಿವಾಸಕ್ಕೆ ಅನಧಿಕೃತವಾಗಿ ವಿದ್ಯುತ್ ಸಂಪರ್ಕ ಪಡೆದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ದೀಪಾವಳಿ ಹಬ್ಬದ ಅಂಗವಾಗಿ ಮನೆಗೆ ವಿದ್ಯುತ್ ದೀಪಲಂಕಾರ ಮಾಡಲಾಗಿದ್ದು, ವಿದ್ಯುತ್ ಕಂಬದಿಂದ ಸಂಪರ್ಕ ಪಡೆಯಲಾಗಿತ್ತು. ಅನಧಿಕೃತವಾಗಿ ವಿದ್ಯುತ್ ಬಳಕೆ ಆರೋಪದಡಿ ಅವರ ವಿರುದ್ಧ ಜಯನಗರ ಬೆಸ್ಕಾಂ ಜಾಗೃತದಳ ಇನ್ಸ್ ಪೆಕ್ಟರ್ ಎಫ್ಐಆರ್ ದಾಖಲಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular