HomeKarnatakaಕೇಂದ್ರ ಸಚಿವ ಹೆಚ್.ಡಿ.ಕೆ. ವಿರುದ್ಧ ಎಫ್ಐಆರ್ ಬೆನ್ನಲ್ಲೇ ಉದ್ಯಮಿ ವಿಜಯ್ ತಾತಾ ವಿರುದ್ಧ ಜೆಡಿಎಸ್ ದೂರು

ಕೇಂದ್ರ ಸಚಿವ ಹೆಚ್.ಡಿ.ಕೆ. ವಿರುದ್ಧ ಎಫ್ಐಆರ್ ಬೆನ್ನಲ್ಲೇ ಉದ್ಯಮಿ ವಿಜಯ್ ತಾತಾ ವಿರುದ್ಧ ಜೆಡಿಎಸ್ ದೂರು

ಬೆಂಗಳೂರು: ಉದ್ಯಮಿ ವಿಜಯ ತಾತಾ ವಿರುದ್ಧ ಜೆಡಿಎಸ್ ನಿಂದ ಅಮೃತಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ 50 ಕೋಟಿಗೆ ಬೇಡಿಕೆ ಇಟ್ಟು ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ರಿಯಲ್ ಎಸ್ಟೇಟ್ ಉದ್ಯಮಿ ವಿಜಯ್ ತಾತಾ ಎಂಬುವವರು ದೂರು ನೀಡಿದ್ದರು. ಈ ಸಂಬಂಧ ಬೆಂಗಳೂರಿನ ಅಮೃತಹಳ್ಳಿ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಉದ್ಯಮಿ ವಿಜಯ್ ತಾತಾ ದೂರಿನ ಮೇರೆಗೆ ಕುಮಾರಸ್ವಾಮಿ ಅವರೊಂದಿಗೆ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ರಮೇಶಗೌಡ ವಿರುದ್ಧವು ಎಫ್ಐಆರ್ ದಾಖಲಾಗಿದೆ. ಬಿಎನ್ಎಸ್ ಯು/ಎಸ್(5), 308, (2)351(2) ಅಡಿಯಲ್ಲಿ ಕೇಸ್ ದಾಖಲಾಗಿದೆ.

ಇದರ ಬೆನ್ನಲ್ಲೇ ವಿಜಯ್ ತಾತಾ ವಿರುದ್ಧ ಬೆಂಗಳೂರಿನ ಅಮೃತಹಳ್ಳಿ ಠಾಣೆಗೆ ಜೆಡಿಎಸ್ ಮುಖಂಡ ರಮೇಶ್ ಗೌಡ ದೂರು ನೀಡಿದ್ದಾರೆ. ಜೆಡಿಎಸ್ ಪಕ್ಷದ ವಿಧಾನ ಪರಿಷತ್ ಮಾಜಿ ಸದಸ್ಯರಾಗಿರುವ ರಮೇಶ್ ಗೌಡ ಅವರು ಉದ್ಯಮಿ ವಿಜಯ್ ತಾತಾ 100 ಕೋಟಿ ರೂ. ಕೇಳಿದ್ದರು. ಇಲ್ಲ ಎಂದಿದ್ದಕ್ಕೆ ಬೆದರಿಕೆ ಹಾಕಿದ್ದಾರೆ. ಮನೆಗೆ ಊಟಕ್ಕೆ ಎಂದು ಕರೆಸಿ ಬೆದರಿಕೆ ಹಾಕಿದ್ದಾರೆ ಎಂದು ದೂರು ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಗಸ್ಟ್ 24ರಂದು ಮನೆಗೆ ಊಟಕ್ಕೆ ಕರೆಸಿ ಬೆದರಿಕೆ ಹಾಕಿದ್ದಾರೆ. ನಾನು ಈಗಾಗಲೇ ನಷ್ಟದಲ್ಲಿದ್ದೇನೆ. ನನಗೆ ಹಣ ಬೇಕು. ನೀವು 100 ಕೋಟಿ ಕೊಡಿ. ಇಲ್ಲವಾದರೆ ನಿಮ್ಮನ್ನು ಮತ್ತು ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದಾಗಿ ರಮೇಶ್ ಗೌಡ ದೂರು ನೀಡಿದ್ದು, ಪೊಲೀಸರು ದೂರು ಸ್ವೀಕರಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular