HomeKarnatakaದೇವೇಗೌಡರ ಸಭೆಗೆ ನುಗ್ಗಿ ಕುಮಾರಸ್ವಾಮಿ ವಿರುದ್ಧ ಘೋಷಣೆ: ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರು ವಶಕ್ಕೆ

ದೇವೇಗೌಡರ ಸಭೆಗೆ ನುಗ್ಗಿ ಕುಮಾರಸ್ವಾಮಿ ವಿರುದ್ಧ ಘೋಷಣೆ: ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರು ವಶಕ್ಕೆ

ತುಮಕೂರು: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಸಭೆಗೆ ನುಗ್ಗಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಘೋಷಣೆ ಕೂಗಿದ ಇಬ್ಬರು ಮಹಿಳಾ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ತುಮಕೂರಿನಲ್ಲಿ ನಡೆದ ಬಿಜೆಪಿ – ಜೆಡಿಎಸ್ ಸಭೆಯಲ್ಲಿ ಹೈಡ್ರಾಮಾ ನಡೆದಿದೆ. ಕಾಂಗ್ರೆಸ್ ಗ್ಯಾರಂಟಿಗಳಿಂದ ಮಹಿಳೆಯರು ದಾರಿ ತಪ್ಪುತ್ತಿದ್ದಾರೆ ಎಂಬ ಕುಮಾರಸ್ವಾಮಿ ಹೇಳಿಕೆ ಖಂಡಿಸಿ ದೇವೇಗೌಡರ ಸಭೆಯಲ್ಲಿ ಹೈಡ್ರಾಮಾ ನಡೆಸಲಾಗಿದೆ.

ಕುಮಾರಸ್ವಾಮಿ ಹೇಳಿಕೆ ವಿರುದ್ಧ ಪ್ರತಿಭಟನೆ ನಡೆಸಲು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದ ಬೆನ್ನಲ್ಲೇ ರಾಜ್ಯದ ಹಲವೆಡೆ ಕಾಂಗ್ರೆಸ್ ಮಹಿಳಾ ಘಟಕದಿಂದ ಪ್ರತಿಭಟನೆ ನಡೆಸಲಾಗಿದೆ. ತುಮಕೂರಿನ ಕುಂಚಿಟಿಗರ ಸಭಾಭವನದಲ್ಲಿ ಬಿಜೆಪಿ -ಜೆಡಿಎಸ್ ಮೈತ್ರಿ ಅಭ್ಯರ್ಥಿ ವಿ. ಸೋಮಣ್ಣ ಪರವಾಗಿ ನಡೆಸಲಾಗುತ್ತಿದ್ದ ಸಮಾವೇಶಕ್ಕೆ ಕಾರ್ಯಕರ್ತರ ಸೋಗಿನಲ್ಲಿ ಬಂದು ಕುಳಿತುಕೊಂಡಿದ್ದ ಇಬ್ಬರು ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಘೋಷಣೆ ಕೂಗಿ ಪ್ರತಿಭಟಿಸಿ ಕಾರ್ಯಕ್ರಮದ ನಡುವೆ ವೇದಿಕೆಗೆ ನುಗ್ಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕುಮಾರಸ್ವಾಮಿ ಮತ್ತು ದೇವೇಗೌಡರ ವಿರುದ್ಧ ಘೋಷಣೆ ಕೂಗಿದ್ದಾರೆ. ಸಭೆಯಲ್ಲಿ ಕೆಲಕಾಲ ಗೊಂದಲದ ವಾತಾವರಣ ಸೃಷ್ಟಿಯಾಗಿದ್ದು, ಸ್ಥಳದಲ್ಲಿದ್ದ ಪೊಲೀಸರು ಇಬ್ಬರು ಮಹಿಳಾ ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular