ಆಸ್ಪತ್ರೆಗೆ ಭೇಟಿ ನೀಡಿ ಕುಮಾರಸ್ವಾಮಿ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅನಾರೋಗ್ಯದ ಕಾರಣ ಅಪೋಲೋ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು, ಇಂದು ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.

ಬೆಂಗಳೂರಿನ ಜಯನಗರ ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ, ಸಚಿವ ಚೆಲುವರಾಯಸ್ವಾಮಿ ಅವರು ಕುಮಾರಸ್ವಾಮಿಯವರ ಆರೋಗ್ಯ ವಿಚಾರಿಸಿದ್ದಾರೆ. ಅವರ ಆರೋಗ್ಯ ಪರಿಸ್ಥಿತಿ ಕುರಿತಾಗಿ ವೈದ್ಯರೊಂದಿಗೆ ಚರ್ಚೆ ನಡೆಸಿದ ಸಿಎಂ, ಕುಮಾರಸ್ವಾಮಿ ಅವರು ಶೀಘ್ರ ಗುಣಮುಖರಾಗಲೆಂದು ಹಾರೈಸಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಕುಮಾರಸ್ವಾಮಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಐಸಿಯುನಿಂದ ವಾರ್ಡ್ ಗೆ ಶಿಫ್ಟ್ ಮಾಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read