HomeKarnatakaಕುಮಾರಸ್ವಾಮಿ ಹಾರ್ಟ್ ಆಪರೇಷನ್ ಬಗ್ಗೆ ಶಾಸಕ ರಮೇಶ್ ವ್ಯಂಗ್ಯ

ಕುಮಾರಸ್ವಾಮಿ ಹಾರ್ಟ್ ಆಪರೇಷನ್ ಬಗ್ಗೆ ಶಾಸಕ ರಮೇಶ್ ವ್ಯಂಗ್ಯ

ಮಂಡ್ಯ: ಚುನಾವಣೆ ಬಂದಾಗ ಕುಮಾರಸ್ವಾಮಿಗೆ ಹೃದಯದ ಸಮಸ್ಯೆ ಎದುರಾಗುತ್ತದೆ ಎಂದು ಶ್ರೀರಂಗಪಟ್ಟಣ ಶಾಸಕ ರಮೇಶ್ ಬಂಡಿಸಿದ್ದೇಗೌಡ ವ್ಯಂಗ್ಯವಾಡಿದ್ದಾರೆ.

ಮಳವಳ್ಳಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಚುನಾವಣೆ ಬಂದಾಗಲೆಲ್ಲ ಕುಮಾರಸ್ವಾಮಿಗೆ ಹೃದಯದ ಸಮಸ್ಯೆ ಎದುರಾಗುವುದು, ಆಸ್ಪತ್ರೆಗೆ ದಾಖಲಾಗುವುದು ಮಾಮೂಲಿಯಾಗಿದೆ ಎಂದಿದ್ದಾರೆ.

ಆಸ್ಪತ್ರೆಯಿಂದ ಹೊರಬಂದ ಮೂರೇ ದಿನಕ್ಕೆ ಕುಮಾರಸ್ವಾಮಿ ರಾಜ್ಯ ಸುತ್ತಾಡುತ್ತಿದ್ದಾರೆ. ಅದು ಹೇಗೆ ಎನ್ನುವುದು ಅರ್ಥವಾಗುತ್ತಿಲ್ಲ. ಚುನಾವಣೆ ಇಲ್ಲದ ಸಮಯದಲ್ಲಿ ಸಹಜವಾಗಿಯೇ ಇರುವ ಕುಮಾರಸ್ವಾಮಿ ಚುನಾವಣೆ ಸಮೀಪಿಸುತ್ತಿದ್ದಂತೆ ಹೃದಯದ ಸಮಸ್ಯೆ ಎನ್ನುತ್ತಾರೆ. ಆಸ್ಪತ್ರೆಗೂ ದಾಖಲಾಗುತ್ತಾರೆ. ಎರಡೇ ದಿನಕ್ಕೆ ಮನೆಗೆ ಬಂದು ಮರುದಿನದಿಂದಲೇ ಎಲ್ಲೆಡೆ ಓಡಾಡುತ್ತಾರೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಮ್ಮ ಚೆಲುವರಾಯಸ್ವಾಮಿಗೂ ಇದೇ ರೀತಿ ಹೃದಯದ ಸಮಸ್ಯೆ ಇದೆ. ಆದರೆ ಅವರು ಆಸ್ಪತ್ರೆ ಸೇರಿದರೆ ತಿಂಗಳುಗಟ್ಟಲೆ ಹೊರಗೆ ಬರುವುದೇ ಇಲ್ಲ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular