HomeKarnatakaBREAKING NEWS: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ಹೈಕೋರ್ಟ್ ಬಿಗ್ ರಿಲೀಫ್

BREAKING NEWS: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ಹೈಕೋರ್ಟ್ ಬಿಗ್ ರಿಲೀಫ್

ಬೆಂಗಳೂರು: ಮಹಿಳೆಯರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.

ಗ್ಯಾರಂಟಿ ಯೋಜನೆಗಳಿಂದ ಹಳ್ಳಿ ಹೆಣ್ಣುಮಕ್ಕಳು ದಾರಿ ತಪ್ಪುತ್ತಿದ್ದಾರೆ ಎಂಬ ಹೇಳಿಕೆ ಮೂಲಕ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿವಾದ ಸೃಷ್ಟಿಸಿದ್ದರು. ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ನೋಟೀಸ್ ಜಾರಿ ಮಾಡಿದ್ದರು.

ಮಹಿಳೆಯರ ಘನತೆ ಹಾಗೂ ಚಾರಿತ್ರ್ಯಕ್ಕೆ ಧಕ್ಕೆಯುಂಟುಮಾಡುವಂತಹ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ 7 ದಿನಗಳ ಒಳಗಾಗಿ ಮಹಿಳಾ ಆಯೋಗದ ಮುಂದೆ ಖುದ್ದು ಹಾಜರಾಗಿ ತಮ್ಮ ಹೇಳಿಕೆ ಬಗ್ಗೆ ಸ್ಪಷ್ಟೀಕರಣ, ವಿವರಣೆ ನೀಡುವಂತೆ ಸೂಚಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದನ್ನು ಪ್ರಶ್ನಿಸಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಮಹಿಳಾ ಆಯೋಗ ನೀಡಿದ್ದ ನೋಟೀಸ್ ಗೆ ತಡೆಯಾಜ್ಞೆ ನೀಡಿದೆ.

ಅಲ್ಲದೇ ದೂರುಗಳಿಲ್ಲದೇ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ಮಹಿಳಾ ಆಯೋಗದ ಅಧ್ಯಕ್ಷೆ ಸ್ವತಃ ಸ್ಪಷ್ಟೀಕರಣ ಕೇಳಿ ನೋಟೀಸ್ ನೀಡಿದ್ದು, ಸೆಕ್ಷನ್ 7ರ ವಿರುದ್ಧ ನೋಟೀಸ್ ನೀಡಿದ್ದಾರೆ. ಕಾರಣ ಕೇಳಿ ಯಾವುದೇ ನೋಟೀಸ್, ಸಮನ್ಸ್ ನೀಡಿಲ್ಲ. ಸ್ಪಷ್ಟೀಕರಣ ನೀಡಿ ಇಲ್ಲವಾದರೆ ಹಾಜರಾಗಿ ಎಂದು ನೋಟೀಸ್ ನೀಡಿದ್ದಾರೆ ಎಂದು ಹೆಚ್.ಡಿ.ಕೆ ಪರ ವಕೀಲರು ವಾದ ಮಂಡಿಸಿದ್ದಾರೆ. ಈ ನಿಟ್ಟಿನಲ್ಲಿ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀಗೆ ಹೈಕೋರ್ಟ್ ನೋಟೀಸ್ ನೀಡಿದೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular