HomeKarnatakaBIG NEWS: ನುಡಿದಂತೆ ನಡೆದ ಕೇಂದ್ರ ಸಚಿವ H.D. ಕುಮಾರಸ್ವಾಮಿ: ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಜಗನ್ನಾಥ್...

BIG NEWS: ನುಡಿದಂತೆ ನಡೆದ ಕೇಂದ್ರ ಸಚಿವ H.D. ಕುಮಾರಸ್ವಾಮಿ: ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಜಗನ್ನಾಥ್ ಪುತ್ರಿಗೆ ಉದ್ಯೋಗ

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಡ್ಡ ಕುಸಿತದಲ್ಲಿ ಕಣ್ಮರೆಯಾಗಿದ್ದ ಜಗನ್ನಾಥ ಅವರ ಪುತ್ರಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕೆಲಸ ಕೊಡಿಸಿದ್ದಾರೆ.

ಕೃತಿಕಾ ಅವರಿಗೆ ಕೆಲಸ ಕೊಡಿಸಿ ನುಡಿದಂತೆ ನಡೆದುಕೊಂಡಿದ್ದಾರೆ. ಕೈಗಾ ಅಣು ವಿದ್ಯುತ್ ಸ್ಥಾವರದ ಬಿಹೆಚ್ಇಎಲ್ ನಲ್ಲಿ ಕೃತಿಕಾ ಗೆ ಉದ್ಯೋಗ ಕಲ್ಪಿಸಲಾಗಿದೆ. ದೂರವಾಣಿ ಮೂಲಕ ಕುಮಾರಸ್ವಾಮಿ ಉದ್ಯೋಗ ಖಾತರಿಪಡಿಸಿದ್ದಾರೆ.

ಮತ್ತೊರ್ವ ಪುತ್ರಿ ಪಲ್ಲವಿ ನಾಯಕ ಅವರಿಗೂ ಕಳೆದ ವಾರ ಪ್ರವಾಸೋದ್ಯಮ ಇಲಾಖೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ನೌಕರಿ ನೀಡಲಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನಾ ಸ್ಥಳಕ್ಕೆ ಭೇಟಿ ನೀಡಿದಾಗ ಕುಮಾರಸ್ವಾಮಿ ಕೆಲಸ ಕೊಡಿಸುವ ಭರವಸೆ ನೀಡಿದ್ದರು. ಅಂತೆಯೇ ಅವರು ಕೆಲಸ ಕೊಡಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular