HomeKarnatakaಕುಮಾರಸ್ವಾಮಿಯವರಿಂದ ಮಮತಾ ಬ್ಯಾನರ್ಜಿ ಭೇಟಿ; ಚುನಾವಣಾ ಪ್ರಚಾರಕ್ಕೆ ಬರುವಂತೆ ಆಹ್ವಾನ

ಕುಮಾರಸ್ವಾಮಿಯವರಿಂದ ಮಮತಾ ಬ್ಯಾನರ್ಜಿ ಭೇಟಿ; ಚುನಾವಣಾ ಪ್ರಚಾರಕ್ಕೆ ಬರುವಂತೆ ಆಹ್ವಾನ

ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೂ ದಿನಾಂಕ ಘೋಷಣೆಯಾಗಿಲ್ಲವಾದರೂ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳ ನಾಯಕರು ಭರ್ಜರಿ ಪ್ರಚಾರ ಕಾರ್ಯ ನಡೆಸುತ್ತಿದ್ದಾರೆ. ಮೂರು ಪಕ್ಷಗಳಿಂದ ರಾಜ್ಯದಾದ್ಯಂತ ಸಮಾವೇಶಗಳು ನಡೆಯುತ್ತಿದ್ದು, ಜೆಡಿಎಸ್ ಈಗಾಗಲೇ ಅಭ್ಯರ್ಥಿಗಳ ತನ್ನ ಮೊದಲ ಪಟ್ಟಿಯನ್ನು ಪ್ರಕಟಿಸಿದೆ.

ಇದರ ಮಧ್ಯೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಶುಕ್ರವಾರದಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಕೊಲ್ಕತ್ತದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಸಂದರ್ಭದಲ್ಲಿ ರಾಷ್ಟ್ರ ರಾಜಕಾರಣದ ಪ್ರಸಕ್ತ ಪರಿಸ್ಥಿತಿಗಳ ಕುರಿತು ಉಭಯ ನಾಯಕರು ಚರ್ಚೆ ನಡೆಸಿದ್ದು, ಅಲ್ಲದೆ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪರ ಪ್ರಚಾರ ಕಾರ್ಯಕ್ಕೆ ಆಗಮಿಸುವಂತೆ ಮಮತಾ ಬ್ಯಾನರ್ಜಿ ಅವರನ್ನು ಕುಮಾರಸ್ವಾಮಿ ಆಹ್ವಾನಿಸಿದ್ದಾರೆ ಎಂದು ತಿಳಿದುಬಂದಿದೆ.

For Latest News Updates, Join Our Whatsapp Community🚩
RELATED ARTICLES

Most Popular