ಬೆಂಗಳೂರು: ಮಂತ್ರಿಗಳ ಮಾನಗೇಡಿ ಕೃತ್ಯಗಳನ್ನೂ ಸಮರ್ಥನೆ ಮಾಡಿಕೊಳ್ಳುವ ಲಜ್ಜೆಗೇಡಿ ಮುಖ್ಯಮಂತ್ರಿ ಈ ರಾಜ್ಯಕ್ಕೆ ವಕ್ಕರಿಸಿದ್ದಾರೆ ಎಂದು ಸಿಎಂ ಸಿದ್ಧರಾಮಯ್ಯ ಅವರ ವಿರುದ್ಧ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಚಿವರ ಸುಲಿಗೆಯನ್ನೇ ಸಿಗ್ಗಿಲ್ಲದೆ ಸಮರ್ಥನೆ ಮಾಡಿಕೊಳ್ಳುವ ‘ಸಿದ್ದಕಲೆ’ ಅಸಹ್ಯ ಮತ್ತು ವಾಕರಿಕೆ ತರಿಸುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.
ನಿಮ್ಮ ಸಚಿವರ ವಿರುದ್ಧ ನಿಮ್ಮ ಕಾಂಗ್ರೆಸ್ ಶಾಸಕರೇ ಬರೆದ ಪತ್ರವನ್ನೇ ನಕಲಿ ಎಂದು ಬಿಂಬಿಸಿದ ‘ನಕಲಿರಾಮ’ನ ಉಪ್ಪುಹುಳಿ ಖಾರದ ಬಗ್ಗೆ ನನಗೆ ಗೊತ್ತಿಲ್ಲದ್ದೇನಲ್ಲ. ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರು ಉಗಿದು ಉಪ್ಪಾಕಿದ ಮೇಲೆ ಆ ನಕಲಿ ಪತ್ರ ‘ಅಸಲಿ’ಯಾದ ಕಥೆಯ ಹಕೀಕತ್ತು ಏನಿರಬಹುದು ಸಿಎಂ ಸಾಹೇಬರೇ? ಎಂದು ಪ್ರಶ್ನಿಸಿದ್ದಾರೆ.
ನಿಮ್ಮ ರಾಜಕೀಯ ಬದುಕಿಗೆ ಬ್ಲ್ಯಾಕ್’ ಮೇಲೇ ಬಂಡವಾಳ. ಗೃಹ ಸಚಿವರು, ಹಿರಿಯ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ನಡೆದ ‘ಅಪ್ಪಯ್ಯ ಮತ್ತು ಅತೀಂದ್ರನ ಆಟಾಟೋಪ’ ಕಂಡು ಹೌಹಾರಿದವರು ಯಾರು? ವರ್ಗಾವಣೆ ಪಟ್ಟಿಗೆ ಅಲ್ಲಿ ಬಿದ್ದ ಟಿಕ್ಕುಗಳ ಲೆಕ್ಕ ಹೇಳಬೇಕಾ ಟಿಕ್ ಟಿಕ್ ಸಿದ್ದರಾಮಯ್ಯ? ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
https://twitter.com/hd_kumaraswamy/status/1688719770718552064
https://twitter.com/hd_kumaraswamy/status/1688719780986175488
https://twitter.com/hd_kumaraswamy/status/1688719784937140224