HomeKarnatakaಮಂತ್ರಿಗಳ ಮಾನಗೇಡಿ ಕೃತ್ಯಗಳನ್ನೂ ಸಮರ್ಥನೆ ಮಾಡಿಕೊಳ್ಳುವ ಲಜ್ಜೆಗೇಡಿ ಮುಖ್ಯಮಂತ್ರಿ: ಸಿಎಂ ವಿರುದ್ಧ HDK ಆಕ್ರೋಶ

ಮಂತ್ರಿಗಳ ಮಾನಗೇಡಿ ಕೃತ್ಯಗಳನ್ನೂ ಸಮರ್ಥನೆ ಮಾಡಿಕೊಳ್ಳುವ ಲಜ್ಜೆಗೇಡಿ ಮುಖ್ಯಮಂತ್ರಿ: ಸಿಎಂ ವಿರುದ್ಧ HDK ಆಕ್ರೋಶ

ಬೆಂಗಳೂರು: ಮಂತ್ರಿಗಳ ಮಾನಗೇಡಿ ಕೃತ್ಯಗಳನ್ನೂ ಸಮರ್ಥನೆ ಮಾಡಿಕೊಳ್ಳುವ ಲಜ್ಜೆಗೇಡಿ ಮುಖ್ಯಮಂತ್ರಿ ಈ ರಾಜ್ಯಕ್ಕೆ ವಕ್ಕರಿಸಿದ್ದಾರೆ ಎಂದು ಸಿಎಂ ಸಿದ್ಧರಾಮಯ್ಯ ಅವರ ವಿರುದ್ಧ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಚಿವರ ಸುಲಿಗೆಯನ್ನೇ ಸಿಗ್ಗಿಲ್ಲದೆ ಸಮರ್ಥನೆ ಮಾಡಿಕೊಳ್ಳುವ ‘ಸಿದ್ದಕಲೆ’ ಅಸಹ್ಯ ಮತ್ತು ವಾಕರಿಕೆ ತರಿಸುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿಮ್ಮ ಸಚಿವರ ವಿರುದ್ಧ ನಿಮ್ಮ ಕಾಂಗ್ರೆಸ್ ಶಾಸಕರೇ ಬರೆದ ಪತ್ರವನ್ನೇ ನಕಲಿ ಎಂದು ಬಿಂಬಿಸಿದ ‘ನಕಲಿರಾಮ’ನ ಉಪ್ಪುಹುಳಿ ಖಾರದ ಬಗ್ಗೆ ನನಗೆ ಗೊತ್ತಿಲ್ಲದ್ದೇನಲ್ಲ. ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರು ಉಗಿದು ಉಪ್ಪಾಕಿದ ಮೇಲೆ ಆ ನಕಲಿ ಪತ್ರ ‘ಅಸಲಿ’ಯಾದ ಕಥೆಯ ಹಕೀಕತ್ತು ಏನಿರಬಹುದು ಸಿಎಂ ಸಾಹೇಬರೇ? ಎಂದು ಪ್ರಶ್ನಿಸಿದ್ದಾರೆ.

ನಿಮ್ಮ ರಾಜಕೀಯ ಬದುಕಿಗೆ ಬ್ಲ್ಯಾಕ್’ ಮೇಲೇ ಬಂಡವಾಳ. ಗೃಹ ಸಚಿವರು, ಹಿರಿಯ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ನಡೆದ ‘ಅಪ್ಪಯ್ಯ ಮತ್ತು ಅತೀಂದ್ರನ ಆಟಾಟೋಪ’ ಕಂಡು ಹೌಹಾರಿದವರು ಯಾರು? ವರ್ಗಾವಣೆ ಪಟ್ಟಿಗೆ ಅಲ್ಲಿ ಬಿದ್ದ ಟಿಕ್ಕುಗಳ ಲೆಕ್ಕ ಹೇಳಬೇಕಾ ಟಿಕ್ ಟಿಕ್ ಸಿದ್ದರಾಮಯ್ಯ? ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular