BIG NEWS: ಸಿದ್ದರಾಮಯ್ಯ ಕನ್ನಡ ಪಂಡಿತರು ಅಂದುಕೊಂಡಿದ್ದೆ, ಆದರೆ ಅವರಿಗೆ ಕನ್ನಡ ಅರ್ಥ ಆಗಲ್ಲ ಆಂತಾ ಗೊತ್ತಾಗಿದೆ; ಸಿಎಂ ವಿರುದ್ಧ HDK ವಾಗ್ದಾಳಿ

ಬೆಂಗಳೂರು: ಮಹಾಘಟಬಂಧನ್ ಸಭೆಗೆ ಹಲವು ಪಕ್ಷಗಳ ನಾಯಕರಿಗೆ ಆಹ್ವಾನ ನೀಡಲಾಗಿದೆ. ಕಾಂಗ್ರೆಸ್ ನಾಯಕರು ಕೆಲ ಪಕ್ಷಗಳ ನಾಯಕರಿಗೆ ಮಾತ್ರ ಆಹ್ವಾನ ನೀಡಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮರಸ್ವಾಮಿ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, 123 ಸ್ಥಾನ ಬರದಿದ್ದರೆ ಜೆಡಿಎಸ್ ವಿಸರ್ಜನೆ ಎಂದು ಕಾಂಗ್ರೆಸ್ ನಾಯಕರು ಅಪಪ್ರಚಾರ ಮಾಡುತ್ತಿದ್ದಾರೆ. ಪಂಚರತ್ನಯೋಜನೆ ಜಾರಿಗೆ ಒಂದು ಅವಕಾಶ ಕೊಡಿ ಎಂದು ಕೇಳಿದ್ದೆ. ಪಂಚರತ್ನ ಜಾರಿಗೆ ತರದಿದ್ದರೆ ಪಕ್ಷ ವಿಸರ್ಜನೆ ಮಾಡುವುದಾಗಿ ಹೇಳಿದ್ದೆ. ಆದರೆ ಇವರು ಜೆಡಿಎಸ್ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಸಿಎಂ ಸಿದ್ದರಾಮಯ್ಯ ಕನ್ನಡ ಪಂಡಿತರು ಅಂದುಕೊಂಡಿದ್ದೆ. ಆದರೆ ಅವರಿಗೆ ಕನ್ನಡ ಅರ್ಥವಾಗಲ್ಲ ಅಂತಾ ನಿಸುತ್ತಿದೆ ಎಂದು ಕುಮಾರಸ್ವಾಮಿ ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read