ಹಾಸನ ಜಿಲ್ಲೆಗೆ ಇಂದು ಕೇಂದ್ರ ಸಚಿವ ಹೆಚ್.ಡಿ.ಕೆ. ಭೇಟಿ: ದೇಗುಲಗಳ ದರ್ಶನ, ಕಾಫಿ ಬೆಳೆಗಾರರ ಸಮಾವೇಶದಲ್ಲಿ ಭಾಗಿ

ಹಾಸನ: ಹಾಸನ ಜಿಲ್ಲೆಗೆ ಇಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಭೇಟಿ ನೀಡಲಿದ್ದು, ಕಾಫಿ ಬೆಳೆಗಾರರ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.

ಸಕಲೇಶಪುರದಲ್ಲಿ ನಡೆಯಲಿರುವ ಕಾಫಿ ಬೆಳೆಗಾರರ ಸಮಾವೇಶದಲ್ಲಿ ಅವರು ಭಾಗವಹಿಸಲಿದ್ದಾರೆ. ಇದಕ್ಕೂ ಮುನ್ನ ಅವರು ಮನೆದೇವರ ದರ್ಶನ ಪಡೆಯಲಿದ್ದಾರೆ. ಬೆಳಗ್ಗೆ 7 ಗಂಟೆಗೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಯಲಿಯೂರು ಗ್ರಾಮದಲ್ಲಿ ದೇವಿರಮ್ಮ ದೇವಿಗೆ ಪೂಜೆ ಸಲ್ಲಿಸುವರು.

ಹೊಳೆನರಸೀಪುರ ತಾಲೂಕಿನ ಮಾವಿನಕೆರೆ ಬೆಟ್ಟದ ದೇವಸ್ಥಾನಕ್ಕೆ, ಹರದನಹಳ್ಳಿ ದೇವೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಕಾಫಿ ಬೆಳೆಗಾರರ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read