‘ನಾರಿಶಕ್ತಿ’ ಆಕ್ರೋಶಕ್ಕೆ ನಾಮಾವಶೇಷ ಇಲ್ಲದಂತೆ ಹೋಗುವಿರಿ……ಎಚ್ಚರ : ರಾಜ್ಯ ಸರ್ಕಾರದ ವಿರುದ್ಧ ‘HDK’ ವಾಗ್ಧಾಳಿ

ಬೆಂಗಳೂರು : ಸರ್ಕಾರ ಸುಳ್ಳು ಹೇಳಿದ್ದು ಸಾಕು, ಇನ್ನಾದರೂ ಏರಿದ ಬೆಲೆ ಕಡಿತಕ್ಕೆ ಕ್ರಮ ಕೈಗೊಳ್ಳಲಿ. ಇಲ್ಲವಾದರೆ ರಾಜ್ಯದ ನಾರಿಶಕ್ತಿ ಆಕ್ರೋಶಕ್ಕೆ ನೀವು ನಾಮಾವಶೇಷ ಇಲ್ಲದಂತೆ ಹೋಗುತ್ತೀರಿ..ಎಚ್ಚರ ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ವಾಗ್ಧಾಳಿ ನಡೆಸಿದ್ದಾರೆ.

ಟ್ವೀಟ್ ಮಾಡಿರುವ ಹೆಚ್ಡಿಕೆ ‘ 5 ಗ್ಯಾರಂಟಿಗಳಿಂದ ಜನೋದ್ಧಾರ ಗ್ಯಾರಂಟಿ ಎಂದು ಹಸಿಸುಳ್ಳು ಹೇಳಿದ್ದ ರಾಜ್ಯ ಸರಕಾರ ಬರಗೆಟ್ಟ ಈ ಹೊತ್ತಿನಲ್ಲಿ ಅಂಬರದ ಮೇಲೆ ಕೂತು ಸ್ವಯಂವರ ಮಾಡಿಕೊಳ್ಳುತ್ತಿರುವ ಮತಗೆಟ್ಟ ವರನಂತೆ ವರ್ತಿಸುತ್ತಿದೆ. ಬೆಲೆ ಏರಿಕೆ ಹೊಡೆತಕ್ಕೆ ಜನ ತತ್ತರಿಸುತ್ತಿರುವುದು ಅದರ ಕಣ್ಣಿಗೆ ಕಾಣುತ್ತಿಲ್ಲ ಎಂದು ಕಿಡಿಕಾರಿದ್ದಾರೆ.

ನುಡಿದಂತೆ ನಡೆದಿದ್ದೇವೆ ಎಂದಿರಿ, ನುಡಿದಂತೆ ಎಲ್ಲಿ ನಡೆದಿದ್ದೀರಿ? ನುಡಿದಂತೆ ನಡೆದಿದ್ದೇವೆ ಎಂದರೆ ಲಂಗೂ ಲಗಾಮು ಇಲ್ಲದೆ ಬೆಲೆಗಳನ್ನು ಆಕಾಶಕ್ಕೆ ಜಿಗಿಸುವುದಾ? ಮಾರುಕಟ್ಟೆಯ ದಲ್ಲಾಳಿಗಳಿಗೆ ಶಕ್ತಿ ತುಂಬುವುದಾ? ಶಕ್ತಿ ಯೋಜನೆ ಮೂಲಕ ಮಹಿಳೆಯರ ಗಮನ ಬೇರೆಡೆಗೆ ಸೆಳೆದು, ಅವರ ಅಡುಗೆ ಮನೆ ಬಜೆಟ್’ಗೆ ಕೊಳ್ಳಿ ಇಡುವುದಾ? ಎಂದು ಕಿಡಿಕಾರಿದ್ದಾರೆ. ಕಾಂಗ್ರೆಸ್ ಪಕ್ಷದ ಹೊಸ ಗ್ಯಾರಂಟಿಗಳು 1.ಅಕ್ಕಿಭಾಗ್ಯ ಹಗಲು ಕನಸು, ಬೆಲೆ ಏರಿಕೆ ಕನಸು ನನಸು! 2.ಗೃಹಜ್ಯೋತಿ ಈಗ ಸುಡುಜ್ಯೋತಿ!! 3.ಶಕ್ತಿ ಯೋಜನೆಯಿಂದ ಸಾರಿಗೆ ವ್ಯವಸ್ಥೆಯಲ್ಲಿ ಅರಾಜಕತೆ!!! 4.ಗೃಹಲಕ್ಷ್ಮಿಗೆ ಗ್ರಹಣ!!!! 5.ನಿದಿರೆಗೆ ಜಾರಿದೆ ಯುವನಿಧಿ ಎಂದು ಟ್ವಿಟರ್ ನಲ್ಲಿ ಹೆಚ್ಡಿಕೆ ಲೇವಡಿ ಮಾಡಿದ್ದಾರೆ.

https://twitter.com/hd_kumaraswamy/status/1673253323284291584

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read