HomeKarnatakaಮಹಿಳೆ ಅಪಹರಣ ಪ್ರಕರಣದಲ್ಲಿ ಹೆಚ್.ಡಿ. ರೇವಣ್ಣಗೆ ರಿಲೀಫ್: 7 ದಿನಗಳ ಬಳಿಕ ಜೈಲಿಂದ ಬಿಡುಗಡೆ ಭಾಗ್ಯ

ಮಹಿಳೆ ಅಪಹರಣ ಪ್ರಕರಣದಲ್ಲಿ ಹೆಚ್.ಡಿ. ರೇವಣ್ಣಗೆ ರಿಲೀಫ್: 7 ದಿನಗಳ ಬಳಿಕ ಜೈಲಿಂದ ಬಿಡುಗಡೆ ಭಾಗ್ಯ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರಿಗೆ 7 ದಿನಗಳ ನಂತರ ಬಿಡುಗಡೆ ಭಾಗ್ಯ ಸಿಕ್ಕಿದೆ.

ಇದರೊಂದಿಗೆ ಹೆಚ್.ಡಿ. ರೇವಣ್ಣಗೆ ರಿಲೀಫ್ ಸಿಕ್ಕಿದೆ. ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದ ಸಂತ್ರಸ್ತೆಯ ಅಪಹರಣ ಕೇಸ್ ನಲ್ಲಿ ಬಂಧಿತರಾಗಿದ್ದ ರೇವಣ್ಣ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು ಮಂಜೂರು ಮಾಡಿ ಆದೇಶ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪರಪ್ಪನ ಅಗ್ರಹಾರ ಜೈಲಿನಿಂದ ರೇವಣ್ಣ ನಾಳೆ ಬಿಡುಗಡೆಯಾಗುವ ಸಾಧ್ಯತೆ ಇದೆ. 5 ಲಕ್ಷ ರೂಪಾಯಿ ಬಾಂಡ್, ಇಬ್ಬರ ಶ್ಯೂರಿಟಿ ನೀಡಬೇಕು. ಸಾಕ್ಷ್ಯಾಧಾರ ನಾಶಪಡಿಸಬಾರದು. ಎಸ್ಐಟಿ ತನಿಖೆಗೆ ಸಹಕರಿಸಬೇಕು. ಮಂಡ್ಯ ಜಿಲ್ಲೆ ಕೆಆರ್ ನಗರ ತಾಲೂಕು ಪ್ರವೇಶಿಸಬಾರದು ಎಂದು ಷರತ್ತು ವಿಧಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular