HDK ಮತ್ತೊಮ್ಮೆ ಸಿಎಂ ಆಗಲಿ ಎಂದು ಪ್ರಾರ್ಥನೆ ಸಲ್ಲಿಸಿದ ರೇವಣ್ಣ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಅಧಿಕಾರಕ್ಕೇರಲು ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ನಾಯಕರು ಭರ್ಜರಿ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದು, ಇದರ ಜೊತೆಗೆ ದೇವರ ಮೊರೆಯನ್ನೂ ಹೋಗುತ್ತಿದ್ದಾರೆ.

ದೇವರ ಮೇಲೆ ಅಪಾರ ಭಕ್ತಿ ಹೊಂದಿರುವ ಜೆಡಿಎಸ್ ಶಾಸಕ ಹೆಚ್‍.ಡಿ. ರೇವಣ್ಣ ಶನಿವಾರದಂದು ಮಂಡ್ಯ ಜಿಲ್ಲೆ ಮೇಲುಕೋಟೆಯಲ್ಲಿ ನಡೆದ ವೈರಮುಡಿ ಉತ್ಸವದಲ್ಲಿ ಕುಟುಂಬ ಸಮೇತರಾಗಿ ಪಾಲ್ಗೊಂಡಿದ್ದು ಪ್ರಾರ್ಥನೆ ಸಲ್ಲಿಸಿದ್ದಾರೆ.

ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಜನರಿಗೆ ಒಳ್ಳೆಯದಾಗಲಿ. ದೇವೇಗೌಡರು ಹಾಗೂ ನನ್ನ ತಾಯಿ ಆರೋಗ್ಯ ಉತ್ತಮವಾಗಿರಲಿ. ಅಲ್ಲದೆ ಜೆಡಿಎಸ್ ಸ್ವತಂತ್ರವಾಗಿ ಅಧಿಕಾರಕ್ಕೆ ಬಂದು ಕುಮಾರಸ್ವಾಮಿಯವರು ಮತ್ತೊಮ್ಮೆ ರಾಜ್ಯದ ಮುಖ್ಯಮಂತ್ರಿ ಆಗಲಿ ಎಂದು ಪ್ರಾರ್ಥಿಸಿದ್ದೇನೆ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read