ಬೆಂಗಳೂರು: ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭೆ ಉಪಚುನಾವಣೆ ಪ್ರಚಾರ ರಂಗೇರಿದೆ. ಜೆಡಿಎಸ್ ರಾಜ್ಯ ಅಧ್ಯಕ್ಷರೂ ಆಗಿರುವ ಕೇಂದ್ರ ಕೈಗಾರಿಕಾ ಸಚಿವ ಹೆಚ್.ಡಿ. ಕುಮಾರಸ್ವಾಮಿ ಏಪ್ರಿಲ್ 4 ಮತ್ತು 5 ರಂದು ಎರಡೂ ಕ್ಷೇತ್ರಗಳಲ್ಲಿ ಮಿತ್ರ ಪಕ್ಷ ಬಿಜೆಪಿ ಅಭ್ಯರ್ಥಿಗಳ ಪರ ಅಬ್ಬರದ ಪ್ರಚಾರ ನಡೆಸಲಿದ್ದಾರೆ.
ಏಪ್ರಿಲ್ 4ರಂದು ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸ ಕರಿಯಪ್ಪ ಪರವಾಗಿ ಪ್ರಚಾರ ನಡೆಸಲಿದ್ದಾರೆ. ಏಪ್ರಿಲ್ 5ರಂದು ಬಾಗಲಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರವಾಗಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಪ್ರಚಾರ ನಡೆಸಿ ಮತ ಯಾಚಿಸಲಿದ್ದಾರೆ.
ಕುಮಾರಸ್ವಾಮಿ ಪ್ರಚಾರದ ವೇಳೆ ಅವರಿಗೆ ಜೆಡಿಎಸ್ ಶಾಸಕರು, ಸಂಸದರು, ಮಾಜಿ ಸಚಿವರು, ಮುಖಂಡರು ಸಾಥ್ ನೀಡಲಿದ್ದಾರೆ. ಬಿಜೆಪಿ ನಾಯಕರು ಪಕ್ಷದ ಅಭ್ಯರ್ಥಿಗಳ ಪರ ಈಗಾಗಲೇ ಭರ್ಜರಿ ಪ್ರಚಾರ ನಡೆಸಿದ್ದಾರೆ.

