
ಬೆಂಗಳೂರು : ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಸ್ಥಾನಕ್ಕೆ ನಿವೃತ್ತ ನ್ಯಾಯಮೂರ್ತಿ ಎಲ್. ನಾರಾಯಣಸ್ವಾಮಿ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಅಧ್ಯಕ್ಷರು ಹಾಗೂ ಇಬ್ಬರು ಸದಸ್ಯರನ್ನು ರಾಜ್ಯ ಸರ್ಕಾರ ನೇಮಕ ಮಾಡಿದ್ದು, ನಿವೃತ್ತ ಜಿಲ್ಲಾ ನ್ಯಾಯದೀಶ ಎಸ್. ಕೆ.ವಂಟಿಗೋಡಿ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಶ್ಯಾಮ್ ಭಟ್ ಅವರನ್ನು ಸದಸ್ಯರನ್ನಾಗಿ ನೇಮಿಸಿದೆ.

