HomeKarnatakaಹೆಡ್ ಕಾನ್ಸ್ ಟೇಬಲ್ ಅನುಮಾನಾಸ್ಪದ ಸಾವು ಪ್ರಕರಣ; ಮರಣೋತ್ತರ ಪರೀಕ್ಷೆಯಲ್ಲಿ ಆಘಾತಕಾರಿ ಮಾಹಿತಿ ಬಹಿರಂಗ

ಹೆಡ್ ಕಾನ್ಸ್ ಟೇಬಲ್ ಅನುಮಾನಾಸ್ಪದ ಸಾವು ಪ್ರಕರಣ; ಮರಣೋತ್ತರ ಪರೀಕ್ಷೆಯಲ್ಲಿ ಆಘಾತಕಾರಿ ಮಾಹಿತಿ ಬಹಿರಂಗ

ಬೆಂಗಳೂರು: ಬೆಂಗಳೂರಿನ ವಿಜಯನಗರ ಸಂಚಾರಿ ಠಾಣೆ ಹೆಡ್ ಕಾನ್ಸ್ ಟೇಬಲ್ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಮರಣೋತ್ತರ ಪರೀಕ್ಷೆಯಲ್ಲಿ ಆಘಾತಕಾರಿ ಅಂಶ ಬಯಲಾಗಿದೆ.

ವಿಜಯನಗರ ಸಂಚಾರಿ ಠಾಣೆ ಹೆಡ್ ಕಾನ್ಸ್ ಟೇಬಲ್ ನವೀನ್ ಕುಮಾರ್, ಅತ್ತಿಗುಪ್ಪೆಯ ನಿವಾಸದಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದರು. ಫೋನ್ ಕರೆ ಮಾಡಿದರೂ ಸ್ವೀಕರಿಸದಿದ್ದಾಗ ಸಿಬ್ಬಂದಿಗಳು ಮನೆಗೆ ಹೋಗಿ ನೋಡಿದ್ದಾರೆ. ಈ ವೇಳೆ ನವೀನ್ ಕುಮಾರ್ ಸಾವನ್ನಪ್ಪಿರುವುದು ತಿಳಿದುಬಂದಿದೆ. ಬಳಿಕ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿತ್ತು. ಇದೀಗ ವರದಿ ಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮರಣೋತ್ತರ ಪರೀಕ್ಷೆಯಲ್ಲಿ ಹೆಡ್ ಕಾನ್ಸ್ ಟೇಬಲ್ ನವೀನ್ ಕುಮಾರ್ ಮದ್ಯದಲ್ಲಿ ವಿಷ ಬೆರಸಿ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ತಿಳಿದುಬಂದಿದೆ.

ಕೌಟುಂಬಿಕ ಕಲಹದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು ಈ ನಿಟ್ಟಿನಲ್ಲಿ ತನಿಖೆ ಮುಂದುವರೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular