ಕಲಬುರಗಿ: ಗಣೇಶ ವಿಸರ್ಜನೆ ಮೆರವಣಿಗೆ ಭದ್ರತೆಗೆ ತೆರಳಿದ್ದ ಹೆಡ್ ಕಾನ್ಸ್ ಟೇಬಲ್ ಓರ್ವರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಸೇಡಂನಲ್ಲಿ ನಡೆದಿದೆ.
ಇಲ್ಲಿನ ಮಳಖೇಡದಲ್ಲಿ ಈ ದುರಂತ ಸಂಭವಿಸಿದೆ. 46 ವರ್ಷದ ಮನೋಹರ್ ಮೃತ ಹೆಡ್ ಕಾನ್ಸ್ ಟೆಬಲ್. ಮಳಖೇಡ ಪೊಲೀಸ್ ಠಾಣೆ ಹೆಡ್ ಕಾನ್ಸ್ ಟೇಬಲ್ ಆಗಿದ್ದರು. ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತದಿಂದ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸಪತ್ರೆಗೆ ಕರೆದೊಯ್ಯಲಾಯಿತು. ಆದರೆ ಮಾರ್ಗಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ.