ಕೋಲಾರ: ಕರ್ತವ್ಯ ನಿರ್ವಹಿಸುತ್ತಿದ್ದಾಗಲೇ ತೀವ್ರ ಎದೆನೋವಿನಿಂದ ಹೆಡ್ ಕಾನ್ಸ್ ಟೇಬಲ್ ಓರ್ವರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಕೋಲಾರದಲ್ಲಿ ನಡೆದಿದೆ.
ಸುಬ್ರಹ್ಮಣಿ ಮೃತ ಹೆಡ್ ಕಾನ್ಸ್ ಟೇಬಲ್. ನಂಗಲಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಟೇಬಲ್ ಆಗಿದ್ದರು. ಕರ್ತವ್ಯ ನಿರ್ವಹಿಸುತ್ತಿದ್ದ ಸುಬ್ರಹ್ಮಣಿ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಮಾರ್ಗ ಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ.
ಕೋಲಾರದ ನಂಗಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

