HomeIndiaBIG NEWS: ಹೆಂಡತಿ, ಮಕ್ಕಳನ್ನು ಗುಂಡಿಟ್ಟು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಹೆಡ್ ಕಾನ್ಸ್ ಟೇಬಲ್

BIG NEWS: ಹೆಂಡತಿ, ಮಕ್ಕಳನ್ನು ಗುಂಡಿಟ್ಟು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಹೆಡ್ ಕಾನ್ಸ್ ಟೇಬಲ್

ಹೈದರಾಬಾದ್: ಹೆಡ್ ಕಾನ್ಸ್ ಟೇಬಲ್ ಓರ್ವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಗುಂಡಿಟ್ಟು ಕೊಂದು ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆಂಧ್ರಪ್ರದೇಶದ ಕಡಪಾದಲ್ಲಿ ನಡೆದಿದೆ.

55 ವರ್ಷದ ವೆಂಕಟೇಶ್ವರಲು ಪತ್ನಿ ಹಾಗೂ ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದವರು. ವೆಂಕಟೇಶ್ವರಲು ಕಡಪಾದ ಎರದು ಟೌನ್ ಪೊಲೀಸ್ ಠಾಣೆಯಲ್ಲಿ ರೈಟರ್ ಆಗಿ ಕೆಲಸ ಮಾಡುತ್ತಿದ್ದರು. ನಿನ್ನೆ ತಡರಾತ್ರಿ 11 ಗಂಟೆಯವರೆಗೂ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಬಳಿಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರೌಂಡ್ಸ್ ಗೂ ತೆರಳಿದ್ದರು. ಆನಂತರದಲ್ಲಿ ಮನೆಗೆ ತೆರಳಿದ್ದ ವೆಂಕಟೇಶ್ವರಲು ಪಿಸ್ತೂಲ್ ನಿಂದ ಪತ್ನಿ ಹಾಗೂ ಇಬ್ಬರು ಹೆಣ್ಣು ಮಕ್ಕಳಿಗೆ ಗುಂಡಿಟ್ಟು ಹತ್ಯೆ ಮಾಡಿದ್ದಾರೆ. ಬಳಿಕ ತಾವೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಾವಿಗೂ ಮುನ್ನ ಹೆಡ್ ಕಾನ್ಸ್ ಟೇಬಲ್ ಬರೆದಿಟ್ಟಿರುವ ಡೆತ್ ನೋಟ್ ಪತ್ತೆಯಾಗಿದೆ. ಮೂಲಗಳ ಪ್ರಕಾರ ಹೆಡ್ ಕಾನ್ಸ್ ಟೇಬಲ್ ವೆಂಕಟೇಶ್ವರಲು ಷೇರು ಮಾರುಕಟ್ಟೆಯಲ್ಲಿ ಹಣ ತೊಡಗಿಸಿ ಅಪಾರ ನಷ್ಟಕ್ಕೀಡಾಗಿದ್ದರು. ಅಲ್ಲದೇ ಕೆಲ ಕೌಟುಂಬಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದರು ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಕಡಪಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಾರ್ಥ್ ಕೌಶಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular