ರಾಯಚೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಷ್ಟ್ರೀಯ ನಗರ ಆರೋಗ ಅಭಿಯಾನದಡಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಗುತ್ತಿಗೆ ಆಧಾರದ ಮೇಲೆ ಈ ನೇಮಕಾತಿ ನಡೆಯುತ್ತಿದ್ದು, ಆಸಕ್ತರು ಅರ್ಜಿಗಳನ್ನು ಸಲ್ಲಿಸಬಹುದು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ (ರಿ), ರಾಯಚೂರು ಈ ಕುರಿತು ಪ್ರಕಟಣೆಯನ್ನು ಹೊರಡಿಸಿದೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಯಚೂರು ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನದಡಿ ಮತ್ತು ಪಿ.ಎಂ ಅಭೀಮ್ ಯೋಜನೆಯಡಿಯಲ್ಲಿ 2025-28ನೇ ಸಾಲಿಗೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.
ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯತಿ ರಾಯಚೂರು ಹಾಗೂ ಮಾನ್ಯ ಅಧ್ಯಕ್ಷರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ರಾಯಚೂರು ಇವರ ಅನುಮೋದನೆ ಮೇರೆಗೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿಯಮಾನುಸಾರ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿರುತ್ತದೆ.
ಹುದ್ದೆಗಳ ವಿವರ: ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರು 18 ಹುದ್ದೆಗಳು. ಪಿ.ಎಂ. ಅಭೀಮ್ ಕಾರ್ಯಕ್ರಮ, ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರು 1 ಹುದ್ದೆ. ಎನ್.ಯು.ಹೆಚ್.ಎಂ. ಕಾರ್ಯಕ್ರಮ ಮತ್ತು ಆರೋಗ್ಯ ನಿರೀಕ್ಷಣಾಧಿಕಾಧಿಕಾರಿಗಳು 1 ಹುದ್ದೆ
ಸದರಿ ಗುತ್ತಿಗೆ ಆಧಾರದ ನೇಮಕಾತಿಯನ್ನು ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿಯಮಾನುಸಾರ ರೋಸ್ಟರ್ ಕಮ್ ಮೆರಿಟ್ ಆಧಾರದ ಮೇಲೆ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತದೆ.
ಅರ್ಹ ವಿದ್ಯಾರ್ಹತೆಯುಳ್ಳ ಅಭ್ಯರ್ಥಿಗಳು ದಿನಾಂಕ 25.02.2026 ರಿಂದ 11-03-2026ರ ವರೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ವೆಬ್ಸೈಟ್ : https://raichur.nic.in ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಆನ್ಲೈನ್ ಹೊರತು ಪಡಿಸಿ ಇತರೆ ಯಾವುದೇ ಮೂಲಗಳಿಂದ ಸಲ್ಲಿಸುವ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ಸದರಿ ಗುತ್ತಿಗೆ ಆಧಾರದ ನೇಮಕಾತಿಯು ಎನ್.ಹೆಚ್.ಎಂ. ನಿಯಮಾವಳಿಯ ಷರತ್ತು ಮತ್ತು ನಿಬಂಧನೆಗಳಿಗೆ ಒಳಪಟ್ಟಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಸದಸ್ಯ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಯೋಜನಾ ಅಭಿವೃದ್ಧಿ ಅಧಿಕಾರಿಗಳು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಲಯ ರಾಯಚೂರು ಇವರನ್ನು ಕಛೇರಿ ಅವಧಿಯಲ್ಲಿ ಸಂಪರ್ಕಿಸಿ.
ಕರೆ ಮಾಡಲು ದೂರವಾಣಿ ಸಂಖ್ಯೆಗಳು 9449843121, 9844193931.

