ಬೆಂಗಳೂರು: ಆರೋಗ್ಯ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವೈದ್ಯಾಧಿಕಾರಿಗಳು ಮತ್ತು ಇತರೆ ಸಿಬ್ಬಂದಿ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಮಾಡಲಾಗುವುದು.
2026ರ ಜನವರಿ 1ರಿಂದ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಪ್ರಕ್ರಿಯೆ ಆರಂಭಿಸುವ ಬಗ್ಗೆ ಆರೋಗ್ಯ ಇಲಾಖೆ ವೇಳಾಪಟ್ಟಿ ಪ್ರಕಟಿಸಿದೆ. ಆರೋಗ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯಾಧಿಕಾರಿಗಳು ಮತ್ತು ಇತರೆ ಸಿಬ್ಬಂದಿ ಸೇರಿದಂತೆ ಗ್ರೂಪ್ ಎ, ಬಿ, ಸಿ ಮತ್ತು ಡಿ ವೃಂದದ ಸಿಬ್ಬಂದಿ ವರ್ಗಾವಣೆಗೆ 2026ನೇ ಸಾಲಿನ ವರ್ಗಾವಣೆ ಪ್ರಕ್ರಿಯೆ ಆರಂಭಿಸಬೇಕು. ಇದಕ್ಕಾಗಿ ಆಯಾ ಜಿಲ್ಲಾ ಆರೋಗ್ಯ ಅಧಿಕಾರಿಗಳು ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ.