HomeJobsಆರೋಗ್ಯ ಇಲಾಖೆ: ವಿವಿಧ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗೆ ಅರ್ಜಿ

ಆರೋಗ್ಯ ಇಲಾಖೆ: ವಿವಿಧ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗೆ ಅರ್ಜಿ

ಧಾರವಾಡ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ವೈದ್ಯಾಧಿಕಾರಿ, ಶುಶ್ರೂಷಕಿ, ಪ್ರಯೋಗಶಾಲಾ ತಂತ್ರಜ್ಞರು ಮತ್ತು ಆರೋಗ್ಯ ನಿರೀಕ್ಷಣಾಧಿಕಾರಿಗಳನ್ನು ಧಾರವಾಡ ಜಿಲ್ಲೆಯ ನಮ್ಮ ಕ್ಲಿನಿಕ್‍ಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಹೆಚ್ಚಿನ ಮಾಹಿತಿ ಹಾಗೂ ಅರ್ಜಿಗಳನ್ನು ಭರ್ತಿ ಮಾಡಲು https://dharwad.nic.in  ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಗೆ ಸಂಪರ್ಕಿಸಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತೀರ್ಥಹಳ್ಳಿ ತಾಲೂಕು ಆಸ್ಪತ್ರೆಗೆ ಅರಿವಳಿಕೆ ತಜ್ಞರ ನೇರ ಸಂದರ್ಶನ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಿವಮೊಗ್ಗ: ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯ ವತಿಯಿಂದ ಪತ್ರಿಕಾ ಪ್ರಕಟಣೆಯೊಂದನ್ನು ಹೊರಡಿಸಲಾಗಿದೆ. ತೀರ್ಥಹಳ್ಳಿಯ ಶ್ರೀ ಜಯಚಾಮರಾಜೇಂದ್ರ ತಾಲೂಕು ಆಸ್ಪತ್ರೆಯಲ್ಲಿ ಖಾಲಿ ಇರುವ ಅರಿವಳಿಕೆ ತಜ್ಞ ವೈದ್ಯರ (Anaesthetist) ಹುದ್ದೆಯನ್ನು ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ನೇರ ಸಂದರ್ಶನವನ್ನು ಆಹ್ವಾನಿಸಲಾಗಿದೆ.

ಒಂದು ವರ್ಷ ಅವಧಿಗೆ ತಾತ್ಕಾಲಿಕ ಗುತ್ತಿಗೆ ಆಧಾರದ ಮೇಲೆ, ಮೆರಿಟ್ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲಾಗುವುದು. ತಜ್ಞರಿಗೆ ಸಂಭಾವನೆಯನ್ನು ಎನ್‌ಹೆಚ್‌ಎಂ ಮಾರ್ಗಸೂಚಿಗಳನ್ವಯ ನೀಡಲಾಗುವುದು.

ಜೂನ್ 24 ರಂದು ಬೆಳಗ್ಗೆ 11:00 ಗಂಟೆಯಿಂದ ಮಧ್ಯಾಹ್ನ 1:00 ಗಂಟೆಯವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ, ಬಿ.ಹೆಚ್. ರಸ್ತೆ, ಶಿವಮೊಗ್ಗ ಇಲ್ಲಿ‌ ನೇರ ಸಂದರ್ಶನ ನಡೆಯಲಿದೆ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆ, ಹುಟ್ಟಿದ ದಿನಾಂಕ ಮತ್ತು ಮೀಸಲಾತಿಗೆ ಸಂಬಂಧಿಸಿದ ಎಲ್ಲಾ ಮೂಲ ದಾಖಲಾತಿಗಳು ಒಂದು ಸೆಟ್ ನಕಲು ಪ್ರತಿಗಳು ಹಾಗೂ ಇತ್ತೀಚಿನ ಎರಡು ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಲು ಕೋರಲಾಗಿದೆ.

ಹೆಚ್ಚಿನ ವಿವರಗಳಿಗಾಗಿ ಕಚೇರಿ ವೇಳೆಯಲ್ಲಿ ಖುದ್ದಾಗಿ ಭೇಟಿ ನೀಡಬಹುದು ಅಥವಾ ದೂರವಾಣಿ ಸಂಖ್ಯೆ: 08182-222382 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕು.ಕ ಅಧಿಕಾರಿ ಡಾ.ನಟರಾಜ್ ಕೆ ಎಸ್ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular