ಆರೋಗ್ಯ ಇಲಾಖೆ: ಯೋಗ ತರಬೇತುದಾರರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಸಿ.ಪಿ.ಹೆಚ್.ಸಿ-ಯು.ಹೆಚ್.ಸಿ ಕಾರ್ಯಕ್ರಮದಡಿಯಲ್ಲಿ  ಪ್ರಾಥಮಿಕ ಆರೋಗ್ಯ ಕೇಂದ್ರ-ಆಯುಷ್ಮಾನ್ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ 35 ಯೋಗ ತರಬೇತುದಾರರನ್ನು ವಾಕ್ ಇನ್ ಇಂಟರ್‌ವ್ಯೂವ್ ಮುಖಾಂತರ ಗೌರವಧನ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ನವೆಂಬರ್ 10 ಕೊನೆಯ ದಿನವಾಗಿದೆ. ಒಂದು ವೇಳೆ ಖಾಲಿ ಹುದ್ದೆಗಳು ಭರ್ತಿಯಾಗದೇ ಇದ್ದಲ್ಲಿ ಭರ್ತಿಯಾಗುವವರೆಗೂ ಪ್ರತಿ ದಿನ 2026 ರ ಮಾರ್ಚ್ 31 ರವರೆಗೆ ವಾಕ್ ಇನ್ ಇಂಟರ್‌ವ್ಯೂವ್ ನಡೆಸಲಾಗುವುದು. ಆಸಕ್ತರು ಜಿಲ್ಲಾ ಸರ್ವೇಕ್ಷಣಾ ಘಟಕ, ಮೊದಲನೇ ಮಹಡಿ, ಜಿಲ್ಲಾ ಆಡಳಿತ ಭವನ, ಕೊಪ್ಪಳ ಇಲ್ಲಿ ಖುದ್ದಾಗಿ ಅರ್ಜಿ ನಮೂನೆ ಪಡೆದು ತಮ್ಮ ಸೂಕ್ತ ದಾಖಲಾತಿಗಳ ಸಹಿತ ಅರ್ಜಿ ಸಲ್ಲಿಸಲು ಸೂಚಿಸಿದೆ.

ಹೆಚ್ಚಿನ ಮಾಹಿತಿಗಾಗಿ ಕಛೇರಿ ಸಮಯದಲ್ಲಿ ಮೇಲಿನ ವಿಳಾಸಕ್ಕೆ ಭೇಟಿ ನೀಡಿ ಮಾಹಿತಿ ಪಡೆಯಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಲಿಂಗರಾಜು ಟಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read