HomeLatest Newsಎರಡು ಅತ್ಯಾಧುನಿಕ ಆಸ್ಪತ್ರೆಗಳ ನಿರ್ಮಾಣಕ್ಕೆ ಆರೋಗ್ಯ ಇಲಾಖೆ ಅನುಮೋದನೆ

ಎರಡು ಅತ್ಯಾಧುನಿಕ ಆಸ್ಪತ್ರೆಗಳ ನಿರ್ಮಾಣಕ್ಕೆ ಆರೋಗ್ಯ ಇಲಾಖೆ ಅನುಮೋದನೆ

ಬೆಂಗಳೂರು: ಯಲಹಂಕ ತಾಲೂಕು ಬೆಳ್ಳಹಳ್ಳಿ, ಹೆಬ್ಬಾಳ ಕ್ಷೇತ್ರದ ಸಂಜಯ್ ನಗರ ಸಮೀಪ ತಲಾ 75 ಕೋಟಿ ರೂ. ವೆಚ್ಚದಲ್ಲಿ ತಲಾ 125 ಹಾಸಿಗೆ ಸಾಮರ್ಥ್ಯದ ಅತ್ಯಾಧುನಿಕ ಆಸ್ಪತ್ರೆ ನಿರ್ಮಾಣ ಮಾಡಲು ಆರೋಗ್ಯ ಇಲಾಖೆ ಅನುಮೋದನೆ ನೀಡಿದೆ.

ಬೆಂಗಳೂರು ತಾಲೂಕಿನ ಜಾಲ ಹೋಬಳಿ ಉತ್ತನಹಳ್ಳಿ ಗ್ರಾಮದ ಸರ್ವೆ ನಂಬರ್ 72 ರಲ್ಲಿ 7 ಎಕರೆ ಸರ್ಕಾರಿ ಜಮೀನನ್ನು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಕಾಯ್ದಿರಿಸಿ 150 ಕೋಟಿ ರೂಪಾಯಿ ವೆಚ್ಚದಲ್ಲಿ ಸಾಮರ್ಥ್ಯದ ಆಸ್ಪತ್ರೆ ನಿರ್ಮಾಣಕ್ಕೆ ತೀರ್ಮಾನಿಸಲಾಗಿತ್ತು. ಆದರೆ, ಆ ಜಾಗಕ್ಕೆ ಸೂಕ್ತ ಸಾರಿಗೆ ಸೌಲಭ್ಯವಿಲ್ಲದ ಕಾರಣ ಯಲಹಂಕ ಹೋಬಳಿಯ ಬೆಳ್ಳಹಳ್ಳಿಯ 5 ಎಕರೆ ಜಾಗದಲ್ಲಿ, ಹೆಬ್ಬಾಳ ವಿಧಾನಸಭಾ ಕ್ಷೇತ್ರದಲ್ಲಿರುವ ಪಶು ಸಂಗೋಪನೆ ಮತ್ತು ಕೃಷಿ ಇಲಾಖೆ ಆವರಣದ ಭೂಪಸಂದ್ರ ಮುಖ್ಯ ರಸ್ತೆಗೆ ಹೊಂದಿಕೊಂಡಿರುವ ನಾಲ್ಕು ಎಕರೆ ಪ್ರದೇಶದಲ್ಲಿ ಪ್ರತ್ಯೇಕ ಆಸ್ಪತ್ರೆ ನಿರ್ಮಿಸಲು ನಿರ್ಧರಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular