ಭ್ರೂಣಲಿಂಗ ಪತ್ತೆ ಬಗ್ಗೆ ಮಾಹಿತಿ ನೀಡಿದವರಿಗೆ ಬಹುಮಾನ ಮೊತ್ತ ಒಂದು ಲಕ್ಷ ರೂ.ಗೆ ಹೆಚ್ಚಳ

ಬೆಂಗಳೂರು: ಭ್ರೂಣ ಲಿಂಗ ಪತ್ತೆ ಬಗ್ಗೆ ಮಾಹಿತಿ ನೀಡಿದವರಿಗೆ ನೀಡುವ ಬಹುಮಾನವನ್ನು 50 ಸಾವಿರದಿಂದ 1 ಲಕ್ಷ ರೂ.ಗೆ ಏರಿಕೆ ಮಾಡಿ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ.

ಗರ್ಭ ಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ನಿಷೇಧ ಕಾಯ್ದೆ 1994ರ ಪ್ರಕಾರ ಭ್ರೂಣ ಲಿಂಗ ಪತ್ತೆಯು ಶಿಕ್ಷಾರ್ಹ ಅಪರಾಧವಾಗಿದೆ.  2023ರ ಡಿಸೆಂಬರ್ ನಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧ್ಯಕ್ಷತೆಯಲ್ಲಿ ನಡೆದ ಮೇಲ್ವಿಚಾರಣಾ ಮಂಡಳಿ ಸಭೆಯಲ್ಲಿ ಬಹುಮಾನದ ಮೊತ್ತವನ್ನು ಹೆಚ್ಚಳ ಮಾಡಲು ನಿರ್ಧರಿಸಲಾಗಿತ್ತು.

ಗರ್ಭ ಪೂರ್ವ ಮತ್ತು ಪ್ರಸವಪೂರ್ವ ಭ್ರೂಣ ಲಿಂಗ ಪತ್ತೆ ಕಾಯ್ದೆ(PCPNDT) ಅನುಷ್ಠಾನಕ್ಕೆ ಸಂಬಂಧಿಸಿದಂತೆ ಯಶಸ್ವಿಗೊಂಡ ಗುಪ್ತ ಕಾರ್ಯಾಚರಣೆಯಲ್ಲಿ ಮಾಹಿತಿ ನೀಡಿದವರಿಗೆ 1 ಲಕ್ಷ ಬಹುಮಾನ ನೀಡಲಾಗುವುದು. ಬಹುಮಾನ ಮೊತ್ತದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಿಂದ 50,000 ರೂ. ಆಯಾ ಜಿಲ್ಲೆಗಳಲ್ಲಿ ಸಂಗ್ರಹವಾಗಿರುವ PCPNDT ಶುಲ್ಕದಿಂದ 50,000 ರೂ. ಮೊತ್ತ ಭರಿಸಲಾಗುವುದು.

https://twitter.com/KarnatakaVarthe/status/1804133948638798336

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read