HomeKarnatakaಕೊರೊನಾ ಸೋಂಕಿತರ ಅಂತ್ಯಕ್ರಿಯೆಗೆ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ

ಕೊರೊನಾ ಸೋಂಕಿತರ ಅಂತ್ಯಕ್ರಿಯೆಗೆ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಅಂತ್ಯಕ್ರಿಯೆಗೆ ಆರೋಗ್ಯ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ. ಅಂತ್ಯಕ್ರಿಯೆಯಲ್ಲಿ ಭಾಗಿಯಾಗುವವರು ಮಾಸ್ಕ್‌, ಪಿಪಿಇ ಕಿಟ್‌ ಧರಿಸುವುದರ ಜೊತೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ.

ಬಿಬಿಎಂಪಿ ಮತ್ತು ರಾಜ್ಯದ ಇತರೆ ಜಿಲ್ಲೆಗಳಲ್ಲಿ ಕೊರೊನಾ ಸೋಂಕಿತರ ಅಂತ್ಯಕ್ರಿಯೆಗೆ ಚಿತಾಗಾರ, ಸ್ಮಶಾನ ಮತ್ತು ರುದ್ರಭೂಮಿಗಳಲ್ಲಿ ಅವಕಾಶ ಮಾಡಿಕೊಡಬೇಕು.ಯಾವುದೇ ಕಾರಣಕ್ಕೂ ನಿರ್ಬಂಧ ಹೇರಬಾರದು ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಕೊರೊನಾ ಸೋಂಕಿತರ ಅಂತ್ಯಕ್ರಿಯೆಗೆ ಮಾಸ್ಕ್‌, ಕೈಗವಸು, ಪಿಪಿಇ ಕಿಟ್‌ ಧರಿಸುವುದರ ಜೊತೆಗೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular